• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾಸನದಲ್ಲಿ ಕೆಲಸ ಖಾಲಿ ಇದೆ; ಜೂನ್ 30ರೊಳಗೆ ಅರ್ಜಿ ಹಾಕಿ

|

ಬೆಂಗಳೂರು, ಜೂನ್ 15 : ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 7 ಬಿ. ಎಫ್‌. ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರನ್ನು ಸಂಘಟಿಸಿ, ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲು ಮತ್ತು ಅನುಷ್ಠಾನಗೊಳಿಸುವ ಕಾಮಗಾರಿಗಳ ಕಾರ್ಯಸ್ಥಳದ ಮೇಲ್ವೀಚಾರಣೆಗೆ ಬಿ. ಎಫ್‌. ಟಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕರ್ನಾಟಕ ಬ್ಯಾಂಕ್ ನೇಮಕಾತಿ; ಮಂಗಳೂರಿನಲ್ಲಿ ಕೆಲಸ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಸದರಿ ವ್ಯಕ್ತಿಯು ಹಿಂದಿನ 3 ವರ್ಷಗಳಲ್ಲಿ ಕನಿಷ್ಠ ಎರಡು ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರನಾಗಿ ಕೆಲಸ ಮಾಡಿರಬೇಕು.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಜೂ.26ರೊಳಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವವರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಮಹಿಳೆಯರಿಗೆ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು 45 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರಬಾರದು.

ಪೊಲೀಸ್ ಇಲಾಖೆ ನೇಮಕಾತಿ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಹಾಗೂ ಅರ್ಜಿ ನಮೂನೆಯನ್ನು ಪಡೆಯಲು ಹಾಸನ ಜಿಲ್ಲಾ ಪಂಚಾಯತ್ ಕಚೇರಿಗೆ ಭೇಟಿ ನೀಡಬಹುದು.

English summary
Applications invited for the Barefoot Technician(BFTs) post for MGNREGA scheme in Hassan district of Karnataka. Candidates can apply for post till June 30, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X