ವಿಜಯನಗರ; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ವಿಜಯನಗರ, ಅಕ್ಟೋಬರ್ 26; ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ತಿಮ್ಮಲಾಪುರದ ಸರ್ಕಾರಿ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಜೀವಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ.

ಎಂ. ಎಸ್ಸಿ ಬಿ. ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಎಂದು ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

jobs

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 12 ಸಾವಿರ ಸಂಭಾವನೆ ನೀಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9590670202.

ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ 2022-23ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಶಿಪ್ ತರಬೇತಿ ನೀಡಲಾಗುತ್ತಿದೆ.

ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ನವೆಂಬರ್ 30ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು ಕಚೇರಿಯಲ್ಲಿಯೇ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಮಾಡುವವರು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯೋಮಿತಿ 35 ವರ್ಷಗಳು. ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರುವರಿಗೆ ಆದ್ಯತೆ ನೀಡಲಾಗುತ್ತದೆ. ಈ ಮೊದಲು ತರಬೇತಿ ಪಡೆದವರಿಗೆ ಅವಕಾಶವಿರುವುದಿಲ್ಲ.

ಬಳ್ಳಾರಿ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಹಾಗೂ ವಿಜಯನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಅಪ್ರೆಂಟಿಶಿಪ್ ತರಬೇತಿಗೆ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಜನವರಿ 2023 ರಿಂದ ಡಿಸೆಂಬರ್ 2023ರವರೆಗೆ ಒಂದು ವರ್ಷದ ಅವಧಿಯಲ್ಲಿ ಪ್ರತಿ ತಿಂಗಳು 15ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಇತರ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಕಚೇರಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08392-275198.

ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಲೂಕು ಕಚೇರಿ ಆವರಣದಲ್ಲಿರುವ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+