ಎಸ್‌ವಿಸಿ ಸಹಕಾರಿ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ನವೆಂಬರ್ 10; ಎಸ್‌ವಿಸಿ ಸಹಕಾರಿ ಬ್ಯಾಂಕ್ಬ್ರಾಂಚ್ ಮ್ಯಾನೇಜರ್, ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇ-ಮೇಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 30 ನವೆಂಬರ್ ಕೊನೆಯ ದಿನವಾಗಿದೆ.

ಎಸ್‌ವಿಸಿ ಸಹಕಾರಿ ಬ್ಯಾಂಕ್‌ ಲಿಮಿಟೆಡ್ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಬ್ರಾಂಚ್ ಮ್ಯಾನೇಜರ್, ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್‌ವಿಸಿ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ನಿಯಮಗಳ ಅನ್ವಯ ವೇತನ ನೀಡಲಾಗುತ್ತದೆ. 10 ಬ್ರಾಂಚ್ ಮ್ಯಾನೇಜರ್ ಮತ್ತು 10 ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ ಹುದ್ದೆಗಳಿವೆ.

Apply For Branch And Assistant Manager Post At SVC Co Operative Bank

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿ, ಸಿಎ, ಸಿಎಸ್, ಐಸಿಡಬ್ಲ್ಯುಎ, ಎಂಬಿಎ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಬ್ರಾಂಚ್ ಮ್ಯಾನೇಜರ್ ಹುದ್ದೆಗೆ 45 ವರ್ಷ, ಅಸಿಸ್ಟೆಂಟ್ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ 48 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ವಿಸಿ ಸಹಕಾರಿ ಬ್ಯಾಂಕ್‌ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು [email protected] ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ svcbank.com ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ತರಬೇತಿಗೆ ಅರ್ಜಿ ಆಹ್ವಾನ; ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾವಂತ ನಿರುದ್ಯೋಗ ಯುವಕ, ಯುವತಿಯರಿಗೆ ವೃತ್ತಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುತ್ತಿದೆ. ಆಸಕ್ತರಿಂದ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭರ್ಥಿಗಳಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರುವವರಿಗೆ ಸೌರಶಕ್ತಿ ಪ್ಯಾನೆಲ್ ಅಳವಡಿಕೆ ಮತ್ತು ರಿಪೇರಿ ತರಬೇತಿ, ಜೆಸಿಬಿ/ ಟ್ರ್ಯಾಕ್ಟರ್/ ರೋಡ್ ರೋಲರ್/ ಅರ್ಥ್ ಮೂವರ್ಸ್ ಚಾಲನಾ ತರಬೇತಿ ನೀಡಲಾಗುತ್ತದೆ.

ಎಸಿ/ ಕಂಪ್ಯೂಟರ್ ಮತ್ತು ಮೊಬೈಲ್ ರಿಪೇರಿ ತರಬೇತಿಗೆ 21 ರಿಂದ 40 ವರ್ಷಗಳ ವಯೋಮಿತಿ ಇದೆ. ಪಿಯುಸಿ ಕಾಮರ್ಸ್/ ಬಿ.ಕಾಂ ಆದವರಿಗೆ ಅಕೌಂಟ್ ಅಂಡ್ ಟ್ಯಾಲಿ ತರಬೇತಿ, ಬಿ.ಇ ಪದವಿ ಹೊಂದದವರಿಗೆ ಕ್ಯಾಡ್/ ಕ್ಯಾಡ್+/ ಜಾವ ಪೈಥಾನ್ ಬಗ್ಗೆ ತರಬೇತಿ ಇದೆ.

ಡಿಪ್ಲೊಮಾ/ ಯಾವುದೇ ಪದವಿ ಹೊಂದಿದವರಿಗೆ ವೆಬ್ ಡಿಸೈನಿಂಗ್ ತರಬೇತಿ ಮತ್ತು 2ಡಿ ಆನಿಮೇಷನ್/ 3ಡಿ ಆನಿಮೇಷನ್ ಬಗ್ಗೆ ತರಬೇತಿ, ಡಿಪ್ಲೊಮಾ ಪತ್ರಿಕೋದ್ಯಮ/ ಪದವಿಯಲ್ಲಿ ಪತ್ರಿಕೋದ್ಯಮ ಹೊಂದಿದವರಿಗೆ ಟೆಲಿಜರ್ನಲಿಸಂ ತರಬೇತಿ ನೀಡಲಾಗುವುದು.

ಆಸಕ್ತ ಮತ್ತು ಅರ್ಹರು ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆ ದಿನ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka ನಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ದೂರವಾಣಿ ಸಂಖ್ಯೆ 08282-224349 ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್‍ಸಿ/ ಎಸ್‍ಟಿ ಸಹಾಯವಾಣಿ ಸಂಖ್ಯೆ 9482300400 ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+