ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬ್ಯಾಂಕ್ ನೇಮಕಾತಿ; ಜ.28ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜನವರಿ 21; ಕರ್ನಾಟಕ ಬ್ಯಾಂಕ್ ಚೀಫ್ ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ. ಅಗತ್ಯ ದಾಖಲೆಗಳ ಜೊತೆ ಅರ್ಜಿಯನ್ನು ಜನವರಿ 28ರೊಳಗೆ ಇ-ಮೇಲ್ ಕಳಿಸಬಹುದಾಗಿದೆ.

ಮಂಗಳೂರಿನಲ್ಲಿ ಚೀಫ್ ಸೆಕ್ಯುರಿಟಿ ಆಫೀಸರ್ ಹುದ್ದೆಯನ್ನು ಕರ್ನಾಟಕ ಬ್ಯಾಂಕ್ ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ವೇತನ ನೀಡಲಾಗುತ್ತದೆ.

ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿ; ವಿವರಗಳು ಪಶುಸಂಗೋಪನೆ ಮತ್ತು ಮೀನುಗಾರಿಗೆ ಇಲಾಖೆ ನೇಮಕಾತಿ; ವಿವರಗಳು

ಕರ್ನಾಟಕ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿ ಡಿಫೆನ್ಸ್ ಸರ್ವೀಸ್ ವಿಭಾಗದಲ್ಲಿ 5 ವರ್ಷದ ಅನುಭವ ಹೊಂದಿರಬೇಕು.

ನಗರಸಭೆಯಲ್ಲಿ ಲೆಕ್ಕಾಧಿಕಾರಿ ಹುದ್ದೆ ಸೃಷ್ಟಿ; ಸರ್ಕಾರದ ಆದೇಶ ನಗರಸಭೆಯಲ್ಲಿ ಲೆಕ್ಕಾಧಿಕಾರಿ ಹುದ್ದೆ ಸೃಷ್ಟಿ; ಸರ್ಕಾರದ ಆದೇಶ

Apply For Chief Security Officer Post At Karnataka Bank

ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 35 ವರ್ಷಗಳು. ಗರಿಷ್ಠ ವಯೋಮಿತಿ 55 ವರ್ಷಗಳು. ನೇಮಕಾತಿ ನಿಯಮಗಳಂತೆ ವಯೋಮಿತಿ ಸಡಿಲಿಕೆ ಇರುತ್ತದೆ.

ಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿ

ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಇ-ಮೇಲ್ ಕಳಿಸಬಹುದಾಗಿದೆ.

ಜನವರಿ 28ರೊಳಗೆ ಇ-ಮೇಲ್ ಕಳಿಸಲು ವಿಳಾಸ [email protected]. ಆಸಕ್ತರು ಹೆಚ್ಚಿನ ಮಾಹಿತಿಗಾಗಿ karnatakabank.com ವೆಬ್ ಸೈಟ್ ಸಂಪರ್ಕಿಸಬಹುದಾಗಿದೆ.

ಉಚಿತ ತರಬೇತಿ; ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಹಾಗೂ ಜೆಸಿಬಿ ಸಹಯೋಗದಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 30 ದಿನಗಳ ಜೆಸಿಬಿ ಆಪರೇಟರ್ (ಚಾಲನಾ) ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಜನರಿ 31ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು. ರಾಜ್ಯದ ಗ್ರಾಮೀಣ ಬಡ ಯುವಕರಾಗಿರಬೇಕು. ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ವಿಳಾಸಕ್ಕೆ ಸಲ್ಲಿಸಬಹುದು ಅಥವಾ 9449782425, 8050741744 ಗೆ ವ್ಯಾಟ್ಸಪ್ ನಂಬರಿಗೂ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗತ್ತದೆ. ಆಸಕ್ತರು ಇದರ ಸದುಪಯೊಗ ಮಾಡಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಅಪ್ರೆಂಟಿಸ್ ತರಬೇತಿಗೆ ಅರ್ಜಿ; ಕರ್ನಾಟಕ ಮಾಧ್ಯಮ ಅಕಾಡೆಮಿ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ (ಎಸ್.ಸಿ.ಪಿ./ ಟಿ.ಎಸ್.ಪಿ) ಯಡಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲು ಎರಡು ತಿಂಗಳ ಅಪ್ರೆಂಟಿಸ್ ತರಬೇತಿ ಆಯೋಜನೆ ಮಾಡಿದೆ.

ವಿಶೇಷ ಘಟಕ ಯೋಜನೆ (ಪರಿಶಿಷ್ಟ ಜಾತಿ) 22 ಮಂದಿ ಹಾಗೂ ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡ) 8 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ಸ್ಟೈಫಂಡ್ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್. ಎಸ್. ಎಲ್. ಸಿ. ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ಮಾಡಿ ಇ-ಮೇಲ್ ವಿಳಾಸ [email protected] ಮೂಲಕ ಅಥವಾ ಅಂಚೆ ಮೂಲಕ ಜನವರಿ 27ರೊಳಗೆ ತಲುಪುವಂತೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22860164ಗೆ ಕರೆ ಮಾಡಬಹುದಾಗಿದೆ. ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರನ್ನು ಸಹ ಸಂಪರ್ಕಿಸಬಹುದಾಗಿದೆ.

English summary
Karnataka bank invited applications to chief security officer post at Mangaluru. Candidates can submit applications before January 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X