ಚಿತ್ರದುರ್ಗ: ಕೆಲಸ ಖಾಲಿ ಇದೆ, ಮಾಸಿಕ ವೇತನ 27,000 ರೂ.ಗಳು
ಚಿತ್ರದುರ್ಗ, ಮಾರ್ಚ್ 24: ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್ 27 ಕೊನೆಯ ದಿನವಾಗಿದೆ. ಈ ಹುದ್ದೆಗೆ ಮಾಸಿಕ ವೇತನ 27,100 ರೂ.ಗಳನ್ನು ನಿಗದಿಪಡಿಸಿದ್ದು, ಆಸಕ್ತರು ಅರ್ಜಿ ಹಾಕಿ.
ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತರು ಅಗತ್ಯ ದಾಖಲೆಗಳ ಜೊತೆಗೆ ಖುದ್ದಾಗಿ ತೆರಳಿ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಬಿಇ, ಬಿಟೆಕ್, ಬಿಸಿಎ-ಕಂಪ್ಯೂಟರ್ ವಿಜ್ಞಾನ, ಮಾಹಿತಿ ವಿಜ್ಞಾನ, ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಟೆಲಿಕಾಂ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು.
ಈ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಮಾರ್ಚ್ 27ರ ಸಂಜೆ 4 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದು ಹಾಜರಾಗಿ ಸಲ್ಲಿಸಬೇಕು.
ಅರ್ಜಿಗಳನ್ನು ಪತ್ರಾಂಕಿತ ಕಛೇರಿ ಸಹಾಯಕರು, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಜಿಲ್ಲೆ ಇವರಿಗೆ ಖುದ್ದಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇನಾ ನೇಮಕಾತಿಗೆ ನೋಂದಣಿ ಆರಂಭ: ಸೇನಾ ನೇಮಕಾತಿ ಕಚೇರಿ ಬೆಂಗಳೂರು ಹಾಗೂ ಬೆಳಗಾವಿ ವಲಯದಿಂದ ಅಗ್ನಿವೀರ ಭೂಸೇನೆಯಲ್ಲಿ ನೇಮಕಾತಿಗೆ ಆನ್‌ಲೈನ್ ಮೂಲಕ ನೋಂದಣಿ ಆರಂಭಗೊಂಡಿದೆ.
ಬೆಳಗಾವಿ, ಬೀದರ್, ಕಲುಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ನೋಂದಣಿ ಮಾಡಿಸಬಹುದು. ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್, ಟ್ರೇಡ್‌ಮನ್ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾದವರು ನೋಂದಣಿ ಮಾಡಬಹುದು.
ಅಗ್ನಿವೀರ್, ಟ್ರೇಡ್‌ಮನ್ ಹುದ್ದೆಗೆ 8ನೇ ತರಗತಿ ಉತ್ತೀರ್ಣರಾದವರು ನೋಂದಣಿ ಮಾಡಿಸಬೇಕು. ಅಗ್ನಿವೀರ್ ಕ್ಲರ್ಕ್, ಸ್ಟೋರ್‌ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ಸಹ ನೇಮಕಾತಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರೆ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ವೀಕ್ಷಿಸಬಹುದು. ಸೇವೆಗೆ ಸೇರಲು ಬಯಸುವವರು ಏಪ್ರಿಲ್ 10ರೊಳಗೆ ಭಾರತೀಯ ಸೇನೆಯ www.joinindianarmy.nic.in ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು.
ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನ: ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 1 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ (ರಾಜ್ಯ ಮತ್ತು ಜಿಲ್ಲಾ ಮಟ್ಟ) ಅರ್ಜಿ ಕರೆಯಲಾಗಿದೆ.
ಆಸಕ್ತರ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಎಪ್ರಿಲ್ 5, 2025ರೊಳಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಂಗಾಯಣ ಆವರಣದಲ್ಲಿರುವ ಕಛೇರಿಗೆ ಅರ್ಜಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0836-2955522ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.












Click it and Unblock the Notifications