ಬಳ್ಳಾರಿ; ಕೆಲಸ ಖಾಲಿ ಇದೆ, ವೇತನ 19 ಸಾವಿರ ರೂ.ಗಳು
ಬಳ್ಳಾರಿ, ನವೆಂಬರ್ 23: ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 4 ಕೊನೆಯ ದಿನವಾಗಿರುತ್ತದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾನೂನು ನೆರವು ರಕ್ಷಣಾ ಸಲಹೆಗಾರ ಕಛೇರಿಯಲ್ಲಿ ತಾತ್ಕಾಲಿಕವಾಗಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯು ತಾತ್ಕಾಲಿಕವಾಗಿದ್ದು, ಪ್ರಾಧಿಕಾರವು ನೇಮಕಾತಿಯನ್ನು ಯಾವುದೇ ನೋಟಿಸ್ ನೀಡದೇ ರದ್ದುಗೊಳಿಸುವ ಅಧಿಕಾರ ಹೊಂದಿರುತ್ತದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್. ಹೆಚ್. ಪುಷ್ಪಾಂಜಲಿ ದೇವಿ ಹುದ್ದೆ, ವೇತನದ ವಿವರಗಳನ್ನು ನೀಡಿದ್ದಾರೆ.
ಹುದ್ದೆ, ವೇತನ; ಕಛೇರಿ ಆಡಳಿತ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹಾಗೂ ಜವಾನ ತಲಾ 1 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕಛೇರಿ ಆಡಳಿತ ಸಹಾಯಕರಿಗೆ ಮಾಸಿಕ ರೂ.19,000. ಡೆಟಾ ಎಂಟ್ರಿ ಅಪರೇಟರ್‌ಗೆ ರೂ,17,271 ಹಾಗೂ ಜವಾನ ಹುದ್ದೆಗೆ ರೂ. 15202 ಸಂಚಿತ ಸಂಭಾವನೆ ಇದೆ.
ಕಚೇರಿ ಆಡಳಿತ ಸಹಾಯಕ (ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್) ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು
ಯಾವುದೇ ಪದವಿ, ಮೂಲ ಪದ ಸಂಸ್ಕರಣಾ ಕೌಶಲ್ಯಗಳು ಮತ್ತು ಕಂಪ್ಯೂಟರ್‍ಅನ್ನು ನಿರ್ವಹಿಸುವ ಸಾಮರ್ಥ್ಯ ಮತ್ತು ಉತ್ತಮ ಟೈಪಿಂಗ್ ವೇಗ, ಫೈಲ್‍ಗಳನ್ನು ಸಿದ್ಧಪಡಿಸುವ ಸಾಮರ್ಥ್ಯ, ಫೈಲ್ ನಿರ್ವಹಣೆ ಮತ್ತು ಪ್ರಕ್ರಿಯೆ ಜ್ಞಾನ ಹೊಂದಿರಬೇಕು.
ರಿಸೆಪ್ಷನಿಸ್ಟ್/ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಯಾವುದೇ ಪದವಿ, ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಪದ ಮತ್ತು ಡೇಟಾ ಸಂಸ್ಕರಣಾ ಸಾಮರ್ಥ್ಯ, ಟೆಲಿ ಸಂವಹನ ವ್ಯವಸ್ಥೆಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ (ದೂರವಾಣಿ, ಫ್ಯಾಕ್ಸ್ ಯಂತ್ರ, ಸ್ವಿಚ್‍ಬೋರ್ಡ್ ಇತ್ಯಾದಿ), ಉತ್ತಮ ಟೈಪಿಂಗ್ ವೇಗದೊಂದಿಗೆ ಪ್ರಾವೀಣ್ಯತೆ ಹೊಂದಿರಬೇಕು.
ಜವಾನ ಹುದ್ದೆಗೆ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಇತ್ತೀಚಿನ 3 ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನವಾಗಿರುತ್ತದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08392-278077.












Click it and Unblock the Notifications