ದಾವಣಗೆರೆ; ಕೆಲಸ ಖಾಲಿ ಇದೆ, ಜ.15ರ ತನಕ ಅರ್ಜಿ ಹಾಕಿ
ದಾವಣಗೆರೆ, ಜನವರಿ 04; ದಾವಣಗೆರೆ ಜಿಲ್ಲೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಜನವರಿ 15ರ ತನಕ ಅರ್ಜಿ ಸಲ್ಲಿಸಬಹುದು.
ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ ಕರ್ನಾಟಕ ಸರ್ಕಾರ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ಪುರಸಭೆಯಲ್ಲಿ ನೋಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ನೇಮಕಾತಿಯಲ್ಲಿ ಸಮಿತಿಯ ನಿರ್ಧಾರವೇ ಅಂತಿಮ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುತ್ತದೆ. ಮಾಸಿಕ ಗೌರವಧನ 8000 ರೂ., ಪ್ರಯಾಣ ಭತ್ಯೆ 2000 ರೂ. ತನಕ ನೀಡಲಾಗುತ್ತದೆ.
ಅಭ್ಯರ್ಥಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯ (ಪ್ರಮಾಣ ಪತ್ರ ಪಡೆದಿರಬೇಕು). ಪುರಸಭೆ ವ್ಯಾಪ್ತಿಯಲ್ಲಿ ಖಾಯಂ ನಿವಾಸಿಯಾಗಿದ್ದು ಕನಿಷ್ಟ 3 ವರ್ಷ ಸ್ವ-ಸಹಾಯಸಂಘದಲ್ಲಿ ಸದಸ್ಯರಾಗಿರಬೇಕು.
ಬ್ಯಾಂಕುಗಳಿಂದ ಸಾಲ ಪಡೆದು ಬಾಕಿದಾರರಾಗಿರಬಾರದು. ಸರ್ಕಾರಿ/ ಅರೆ ಸರ್ಕಾರಿ/ ಎನ್.ಜಿ.ಓ ಗಳಲ್ಲಿ ಉದ್ಯೋಗಸ್ತರಾಗಿರಬಾರದು. ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಹೊರ ಸಂಚಾರಕ್ಕೆ ಸಿದ್ದರಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷ.
ಅರ್ಹ, ಆಸಕ್ತ ಆಭ್ಯರ್ಥಿಗಳು ಪುರಸಭೆ ಕಚೇರಿ ಅವಧಿಯಲ್ಲಿ ಕಚೇರಿ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜನವರಿ 15 ರ ಸಂಜೆ 5.30ರ ಕೊನೆಯ ದಿನವಾಗಿದೆ.
ಅರ್ಜಿಯನ್ನು ದ್ವಿಪ್ರತಿಯಲ್ಲಿ ಮುಖ್ಯಾಧಿಕಾರಿಗಳು, ಪುರಸಭೆ, ಮಲೇಬೆನ್ನೂರು ಇವರಿಗೆ ಸಲ್ಲಿಸುವುದು .ನಂತರ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ತರಬೇತಿ ಆಯೋಜನೆ; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಎರಡು ದಿನದ ತರಬೇತಿಯನ್ನು ಜನವರಿ 6 ಮತ್ತು 7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದಾವಣಗೆರೆಯ ಪಶು ಆಸ್ಪತ್ರೆ ಆವರಣ, ಪಿ. ಬಿ. ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಯೋಜನೆ ಮಾಡಲಾಗಿದೆ.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆ ನೀಡಲಾಗುವುದಿಲ್ಲ. ಆಸಕ್ತಿಯುಳ್ಳ ರೈತರು, ಮಹಿಳೆಯರು, ನಿರುದ್ಯೋಗ ಯುವಕ, ಯುವತಿಯರು ತರಬೇತಿ ಪಡೆಯಬಹುದು. ತರಬೇತಿಗೆ ಹಾಜರಾಗುವವರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾರ್ಸ್‍ಪೋರ್ಟ್ ಅಳತೆ ಫೋಟೊ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣಪತ್ರದ ಜೆರಾಕ್ಸ್ ತರಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-233787.
ಪಶುಪಾಲನಾ ತರಬೇತಿ; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆಯಲ್ಲಿ ಆಧುನಿಕ ಹೈನುಗಾರಿಕೆ ಕುರಿತು ಎರಡು ದಿನದ ತರಬೇತಿಯನ್ನು ಜನವರಿ 20 ಮತ್ತು 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಶು ಆಸ್ಪತ್ರೆ ಆವರಣ, ಪಿ. ಬಿ. ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆ ನೀಡಲಾಗುವುದಿಲ್ಲ. ಆಸಕ್ತಿಯುಳ್ಳ ರೈತರು, ಮಹಿಳೆಯರು, ನಿರುದ್ಯೋಗ ಯುವಕ, ಯುವತಿಯರು ತರಬೇತಿ ಪಡೆಯಬಹುದು.
ತರಬೇತಿಗೆ ಹಾಜರಾಗುವವರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾರ್ಸ್‍ಪೋರ್ಟ್ ಅಳತೆ ಫೋಟೊ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣಪತ್ರದ ಜೆರಾಕ್ಸ್ ತರಬೇಕು. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ಇವರನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications