ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜನವರಿ 14ರೊಳಗೆ ಅರ್ಜಿ ಹಾಕಿ

ಕೊಪ್ಪಳ, ಜನವರಿ 12; ಕೊಪ್ಪಳ ನಗರಸಭೆ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 14ರೊಳಗೆ ಅರ್ಜಿ ಸಲ್ಲಿಸಬಹುದು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಸ್ವ-ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Apply For Community Resource Person Post At Koppal

ಅರ್ಜಿಗಳನ್ನು ಸಲ್ಲಿಸುವವರು ಕನಿಷ್ಟ ಪಿಯುಸಿ ಅಥವಾ ಅದಕ್ಕೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು. ಕೊಪ್ಪಳ ನಗರಸಭೆ ವ್ಯಾಪ್ತಿಯ ಸ್ವ-ಸಹಾಯ ಸಂಘದಲ್ಲಿ ಕನಿಷ್ಟ ಮೂರು ವರ್ಷದಿಂದ ಸದಸ್ಯೆಯಾಗಿರಬೇಕು.

ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯೆಯಾಗಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಹೊರಸಂಚಾರಕ್ಕೆ ಸಿದ್ದರಿರಬೇಕು. ಅರ್ಜಿ ಸಲ್ಲಿಸುವವರಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಮಿತಿಯ ನಿರ್ಣಯವೇ ಅಂತಿಮವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕಾರ್ಯಾಲಯದ ಅವಧಿಯಲ್ಲಿ ಡೇ-ನಲ್ಮ್ ವಿಭಾಗವನ್ನು ಸಂಪರ್ಕಿಸಿ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದೃಢೀಕೃತ ದಾಖಲಾತಿಗಳೊಂದಿಗೆ ಜನವರಿ 14 ರೊಳಗೆ ಅರ್ಜಿ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ತರಬೇತಿಗೆ ಹೆಸರು ನೋಂದಾಯಿಸಿ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯು 18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರಿಗೆ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ಉಚಿತ ತರಬೇತಿ ನೀಡುತ್ತಿದೆ. ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಜನವರಿ 22ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ ಹಾಗೂ ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗ್ಗೆ ಉಚಿತ ಮಾಹಿತಿ ನೀಡಲಾಗುತ್ತದೆ.

ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುವುದು. ಫೆಬ್ರವರಿ ತಿಂಗಳಿನಲ್ಲಿ ತರಬೇತಿಯು ಆರಂಭವಾಗುತ್ತಿದ್ದು, ಆಸಕ್ತರು ಜನವರಿ 22 ರೊಳಗೆ ತಮ್ಮ ಹೆಸರು, ವಿಳಾಸವನ್ನು ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ದೂರವಾಣಿ ಸಂಖ್ಯೆ 9483485489, 9482188780 ಸಂಪರ್ಕಿಸಬಹುದಾಗಿದೆ.

ಆಯ್ಕೆಪಟ್ಟಿಗೆ ಆಕ್ಷೇಪಣೆಗೆ ಆಹ್ವಾನ; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಶುಶ್ರೂಷಕರ ಹುದ್ದೆಗಳ ಕಾಯ್ದಿರಿಸಿದ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎನ್.ಯು.ಹೆಚ್.ಎಂ ಶುಶ್ರೂಷಕಿ, ಹೆಚ್.ಡಿ.ಯು/ ಐ.ಸಿ.ಯು ಶುಶ್ರೂಷಕರು ಹಾಗೂ ಶುಶ್ರೂಷಕಿಯರ ಹುದ್ದೆಗಳ ಕಾಯ್ದಿರಿಸಿದ ಪಟ್ಟಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೊಪ್ಪಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಈ ಕಾಯ್ದಿರಿಸಿದ ಪಟ್ಟಿಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ, ಅರ್ಜಿದಾರರು ಜನವರಿ 18 ರೊಳಗಾಗಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇಲ್ಲಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.

ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+