ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಜಯನಗರದಲ್ಲಿ ಕೆಲಸ ಖಾಲಿ ಇದೆ; ಜ.27ರ ತನಕ ಅರ್ಜಿ ಹಾಕಿ

|
Google Oneindia Kannada News

ಹೊಸಪೇಟೆ, ಜನವರಿ 17; ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಫ್‌ಲೈನ್ ಮೂಲಕ ಜನವರಿ 27ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಲ್ಲಿ ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿ

ಈ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಮಲಾಪುರ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಅರ್ಹ ಸ್ವ-ಸಹಾಯ ಸಂಘ(ಗುಂಪು)ಗಳ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ; 1,242 ಹುದ್ದೆಗೆ 30 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ! ಕರ್ನಾಟಕ; 1,242 ಹುದ್ದೆಗೆ 30 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ!

Apply For Community Resource Person Post At Vijayanagara

ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿದ್ದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ಗೌರವಧನ 8 ಸಾವಿರ ರೂ. ಮತ್ತು ಪ್ರಯಾಣ ಭತ್ಯೆ 2 ರೂ. ಗಳ ತನಕ ನೀಡಲಾಗುತ್ತದೆ.

4000 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ಒಪ್ಪಿಗೆ, ಜಿಲ್ಲಾವಾರು ಪಟ್ಟಿ 4000 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ಒಪ್ಪಿಗೆ, ಜಿಲ್ಲಾವಾರು ಪಟ್ಟಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ಅರ್ಜಿ ಸಲ್ಲಿಸುವವರು ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುವುದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಕಡ್ಡಾಯ).

ಅಭ್ಯರ್ಥಿ ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು, ಕನಿಷ್ಠ 3 ವರ್ಷಗಳಿಂದ ಸ್ವ-ಸಹಾಯ ಸಂಘದ (ಗುಂಪಿನಲ್ಲಿ) ಸದಸ್ಯರಾಗಿರತಕ್ಕದ್ದು. ಆಂತರಿಕ ಸಾಲ ಪಡೆದು ಮರು ಪಾವತಿಸಿರಬೇಕು / ಚಾಲ್ತಿಯಲ್ಲಿರಬೇಕು ಸಾಲ ಮರು ಪಾವತಿಸದೇ ಸುಸ್ತಿದಾರರಾಗಿರಬಾರದು, ಯಾವುದೇ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ತಾತ್ಕಾಲಿಕ ಉದ್ಯೋಗಸ್ಥರಾಗಿರಬಾರದು.

ಅಭ್ಯರ್ಥಿ ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಭಾಗವಹಿಸುವಂತಿರಬೇಕು. ಸ್ವ-ಸಹಾಯ ಸಂಘ ನಿರ್ವಹಿಸಬೇಕಿರುವ ಪುಸ್ತಕಗಳು ಹಾಗೂ ವಹಿಗಳ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ/ ಜಿಲ್ಲೆಗಳಲ್ಲಿ/ ಹೊರ ರಾಜ್ಯಗಳಲ್ಲಿ ನೀಡುವ ತರಬೇತಿಗೆ ಹಾಜರಾಗುವಂತಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಮಲಾಪುರ ಪಟ್ಟಣ ಪಂಚಾಯಿತಿ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.

ಕುಡಿತಿನಿ ಪಟ್ಟಣ ಪಂಚಾಯಿತಿ; ಕುಡಿತಿನಿ ಪಟ್ಟಣ ಪಂಚಾಯಿತಿ ವತಿಯಿಂದಲೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ಡೇ-ನಲ್ಮ್ ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳನ್ನು ಭರ್ತಿ ಮಾಡಲಾಗುತ್ತಿದೆ.

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 1. ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ಗೌರವಧನ 8 ಸಾವಿರ ರೂ.ಗಳು. 2 ಸಾವಿರ ರೂ. ತನಕ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜನವರಿ 29.

ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುತ್ತದೆ. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯಸ್ಸು 18 ರಿಂದ 45 ವರ್ಷ ವರ್ಷಗಳು. ಕುಡಿತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ಅರ್ಜಿದಾರರು ಕಚೇರಿ ಅವಧಿಯಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಸಕಾಲ ಮಿತ್ರರ ನೇಮಕ: ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ ಮುಖಾಂತರ ಸಕಾಲ ಮಿತ್ರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಸಕಾಲ ಮಿತ್ರ ಯೋಜನೆಗೆ ಆಸಕ್ತಿಯುಳ್ಳ ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರಕಾರೇತರ ಸಂಸ್ಥೆ (ಎನ್‍ಜಿಒಗಳು) ಜನವರಿ 24 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸುವುದು. ಈ ಯೋಜನೆ ಅಡಿ ಯಾವುದೇ ರೀತಿಯ ಆರ್ಥಿಕ ಬಾದ್ಯತೆ ಇರುವುದಿಲ್ಲ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9945732165 ಕರೆ ನೀಡಬಹುದಾಗಿದೆ.

English summary
Applications invited for the community resource person post at Vijayanagara district. Candidates can apply till January 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X