ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 19ರೊಳಗೆ ಅರ್ಜಿ ಹಾಕಿ
ಬಳ್ಳಾರಿ, ಆಗಸ್ಟ್ 09; ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಡೇ-ನಲ್ಮ್ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ ಆಗಸ್ಟ್ 19 ಆಗಿದೆ.
ಸಿರುಗುಪ್ಪ ನಗರಸಭೆ ಕಾರ್ಯಾಲಯದಿಂದ ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ನೇಮಕ ಮಾಡಲಾಗುತ್ತಿದೆ.

ಸಮುದಾಯ ಸಂಪನ್ಮೂಲ ವ್ಯಕ್ತಿಗಳ 3 ಹುದ್ದೆಗಳ ಪೈಕಿ, ಈಗಾಗಲೇ 2 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಬಾಕಿ ಉಳಿದ 1 ಹುದ್ದೆಗೆ ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಹ ಸ್ವ-ಸಹಾಯ(ಗುಂಪು)ಗಳ ಸದಸ್ಯರಿಂದ ಅರ್ಜಿಗಳನ್ನು ಕರೆಯಲಾಗಿದೆ. ಸಿರುಗುಪ್ಪ ನಗರಸಭೆಯ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಆಯ್ಕೆ ಸಮಿತಿಯು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಸಮಿತಿಯ ನಿರ್ಣಯವೇ ಅಂತಿಮ.
ಹುದ್ದೆಯ ಹೆಸರು: ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ರೂ. 8 ಸಾವಿರ ಆಗಿದೆ. ಸಾರಿಗೆ ಭತ್ಯೆ ರೂ. 2 ಸಾವಿರ ಆಗಿದ್ದು (ಅಗತ್ಯತೆಗೆ ತಕ್ಕಂತೆ ಗರಿಷ್ಠ) ನೀಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಯೋಮಿತಿ 18 ರಿಂದ 45 ವರ್ಷಗಳು. ಅಭ್ಯರ್ಥಿಗಳು ಕನಿಷ್ಟ ಪಿಯುಸಿ ದ್ವಿತೀಯ ವರ್ಷ ಉತ್ತೀರ್ಣರಾಗಿರಬೇಕು (ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ). ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು), ಸಿರುಗುಪ್ಪ ನಗರಸಭೆಯ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು, ಕನಿಷ್ಟ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯಯಾಗಿರಬೇಕು.
ಆಂತರಿಕ ಸಾಲ ಪಡೆದು ಕಟುಬಾಕಿದಾರರಾಗಿರಬಾರದು. ಸರ್ಕಾರಿ/ ಅರೇ ಸಕಾರಿ/ ಎನ್.ಜಿ.ಓಗಳಲ್ಲಿ ಉದ್ಯೋಗಸ್ಥರಾಗಿರಬಾರದು. ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಛಾಶಕ್ತಿ ಹೊಂದಿರಬೇಕು. ಕಾರ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗೆ ಸಂಚಾರಕ್ಕೆ ಸಿದ್ದರಿರಬೇಕು.
ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ನಗರಸಭೆ ಕಾರ್ಯಾಲಯವನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 7353745626.
ಸದಸ್ಯರಾಗಲು ಅರ್ಜಿ ಆಹ್ವಾನ; ಧಾರವಾಡ ಜಿಲ್ಲಾ ಸೈನಿಕ ಮಂಡಳಿಗೆ ಬಳ್ಳಾರಿ, ವಿಜಯನಗರ, ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಂದ ಮಾಜಿ ಸೈನಿಕರ ಪ್ರತಿನಿಧಿಗಳನ್ನು ಅಧಿಕಾರೇತರ ಸದಸ್ಯರಾಗಲು ಆಯ್ಕೆ ಮಾಡಲಾಗುತ್ತಿದೆ.
ಈ ಜಿಲ್ಲೆಗಳಲ್ಲಿ ನೆಲೆಸಿರುವ ಮಾಜಿ ಸೈನಿಕರು ಜಿಲ್ಲಾ ಮಂಡಳಿಯ ಅಧಿಕಾರೇತರ ಸದಸ್ಯರಾಗಲು ಅರ್ಜಿ ಸಲ್ಲಿಕೆ ಮಾಡಬಹುದು. ಧಾರವಾಡ ಜಿಲ್ಲಾ ಸೈನಿಕ ಮಂಡಳಿಯ ಮೂರು ವರ್ಷಗಳ ಅವಧಿಯು ಮುಗಿದಿದ್ದು, ಮುಂದಿನ ಮೂರು ವರ್ಷಗಳಿಗೆ ಹೊಸದಾಗಿ ಜಿಲ್ಲಾ ಸೈನಿಕ ಮಂಡಳಿಯನ್ನು ರಚಿಸಬೇಕಾಗಿರುತ್ತದೆ.
ಆದ್ದರಿಂದ ಮಾಜಿ ಸೈನಿಕರ ಪುನರ್ವಸತಿ ಮತ್ತು ಕಲ್ಯಾಣಗಳಲ್ಲಿ ತೊಡಗಿಸಿಕೊಂಡಿರುವ ಮತ್ತು ತೊಡಗಿಸಿಕೊಳ್ಳಲು ಇಚ್ಛೆಯುಳ್ಳ ಮಾಜಿ ಅಧಿಕಾರಿಗಳು/ ಸೈನಿಕರು, ಮಾಜಿ ಅಧಿಕಾರಿ/ ಸೈನಿಕರ ಪತ್ನಿಯರು ಮತ್ತು ಸಮಾಜ ಸೇವೆಯಲ್ಲಿ ತೊಡಗಿರುವ ಗಣ್ಯ ವ್ಯಕ್ತಿಗಳು ತಮ್ಮ ವೈಯಕ್ತಿಕ ವಿವರಗಳನ್ನು ಮತ್ತು ಇಚ್ಚಾ ಪತ್ರವನ್ನು ಸಲ್ಲಿಸಬಹುದು.
ಆಸಕ್ತರು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣ, ಧಾರವಾಡ 580001 ಇಲ್ಲಿಗೆ ಸೆಪ್ಟೆಂಬರ್ 10ರೊಳಗೆ ತಮ್ಮ ವಿವರಗಳನ್ನು ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-24401776.












Click it and Unblock the Notifications