ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಸ್ಕಾಂನಲ್ಲಿ ಉದ್ಯೋಗ; ಜುಲೈ 5ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜೂನ್ 24; ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಆಫ್‌ ಲೈನ್ ಮೂಲಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಜುಲೈ 5ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

Company secretary ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಬೆಸ್ಕಾಂ ನೇಮಕಾತಿ ನಿಯಮಗಳ ಅನ್ವಯ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು

Apply For Company Secretary Post At BESCOM

ಆಯ್ಕೆಯಾದ ಅಭ್ಯರ್ಥಿಗಳಿಗೆ 61,420-103290 ರೂ. ವೇತನ ನಿಗದಿ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬೇಕು.

ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು ಕರ್ನಾಟಕ; ಪಶು ವೈದ್ಯಕೀಯ ಇಲಾಖೆ ನೇಮಕಾತಿ ವಿವರಗಳು

ವಿಳಾಸ; ಭರ್ತಿ ಮಾಡಿದ ಅರ್ಜಿಗಳನ್ನು ಅಭ್ಯರ್ಥಿಗಳು General Manager (A&HR), BESCOM Corporate Office, KR Circle, Bangaluru 560001 ವಿಳಾಸಕ್ಕೆ ಜುಲೈ 5ರೊಳಗೆ ಸಲ್ಲಿಸಬೇಕು.

ಅಭ್ಯರ್ಥಿಗಳು ಬೆಸ್ಕಾಂ ವೆಬ್‌ಸೈಟ್‌ಗೆ ಮೊದಲು ಲಾಗಿನ್ ಆಗಬೇಕು. ಸರಿಯಾದ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ ನೀಡಬೇಕು. ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ವಿವರಗಳನ್ನು ಭರ್ತಿ ಮಾಡಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಅಥವ ಬೇರೆ ಯಾವುದೇ ವಿಧಾನದ ಮೂಲಕ ಕಚೇರಿಗೆ ತಲುಪಿಸಬೇಕು.

Recommended Video

ವಿದ್ಯಾವಂತರು ರಾಜಕೀಯಕ್ಕೆ ಬರಬೇಕು ಅನ್ನೋದು ಇದೆ ಕಾರಣಕ್ಕೆ | Swathi Thippeswamy | Oneindia Kannada

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು bescom.org ವೆಬ್‌ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

English summary
Bangalore Electricity Supply Company Limited (BESCOM) invited applications for company secretary posts. Candidates can apply till July 5, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X