ಧಾರವಾಡ; ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ, ಫೆಬ್ರವರಿ 21; ಧಾರವಾಡದ ತಾಲೂಕುಗಳಲ್ಲಿರುವ ನಾಡಕಚೇರಿಗಳಿಗೆ ಡಾಟಾ ಎಂಟ್ರಿ ಕಂಪ್ಯೂಟರ್ ಆಪರೇಟರ್‌ಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 9 ಕೊನೆಯ ದಿನವಾಗಿದೆ.

ಮಾನವ ಸಂಪನ್ಮೂಲ ಏಜೆನ್ಸಿಯಿಂದ ಹೊರಗುತ್ತಿಗೆ ಆಧಾರದ ಮೇಲೆ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ, ಅಣ್ಣಿಗೇರಿ, ಅಳ್ನಾವರ ಮತ್ತು ಹುಬ್ಬಳ್ಳಿ ನಗರ ತಾಲೂಕುಗಳಲ್ಲಿರುವ ನಾಡಕಚೇರಿಗಳಿಗೆ ಡಾಟಾ ಎಂಟ್ರಿ ಕಂಪ್ಯೂಟರ್ ಆಪರೇಟರ್ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2233840 ಸಂಪರ್ಕಿಸಬಹುದು ಎಂದು ಧಾರವಾಡ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Apply For Computer Operator Post In Dharwad

ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ; ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 21 ಕೊನೆಯ ದಿನವಾಗಿದೆ.

ಶೀಘ್ರಲಿಪಿಗಾರರು (16), ಬೆರಳಚ್ಚು-ನಕಲುಗಾರರು(4), ಆದೇಶ ಜಾರಿಕಾರರು(17) ಮತ್ತು ಬೆರಳಚ್ಚುಗಾರರು (10) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಮಚಂದ್ರ ಡಿ.ಹುದ್ದಾರ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+