ಚಿಕ್ಕಮಗಳೂರಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 16ರೊಳಗೆ ಅರ್ಜಿ ಹಾಕಿ
ಚಿಕ್ಕಮಗಳೂರು, ಆಗಸ್ಟ್ 06; ಜಂಟಿ ಕೃಷಿ ನಿರ್ದೇಶಕರ ಕಚೇರಿ ಚಿಕ್ಕಮಗಳೂರು ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 16 ಕೊನೆಯ ದಿನವಾಗಿದೆ.
ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ 2021-22ನೇ ಸಾಲಿಗೆ ಕಾರ್ಯ ನಿರ್ವಹಣೆ ಮಾಡಲು ಈ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
Consultant 1, Technical assistants 1 ಹುದ್ದೆಗಳನ್ನು ಗುತ್ತಿಗೆ ಆಧಾರದ ಷರತ್ತಿಗೆ ಒಳಪಟ್ಟು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ 16/8/2021ರ ಸಂಜೆ 5 ಗಂಟೆಯ ಒಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸತಕ್ಕದ್ದು.

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ಅದಕ್ಕಾಗಿ ನೇಮಕಾತಿ ಸಂದರ್ಭದಲ್ಲಿ ಯುವಕ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ ಎಂದು ಚಿಕ್ಕಮಗಳೂರು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Consultant (1 ಹುದ್ದೆ) ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕೃಷಿ ವಿಷಯದಲ್ಲಿ ಪದವಿ ಪಡೆದಿರಬೇಕು ಸ್ನಾತಕೋತ್ತರ ಪದವಿಯ Agronomy/ ಅಗ್ರಿ. ವಿಸ್ತರಣೆ/ ಮಣ್ಣು ಪರೀಕ್ಷೆ, ಸಸ್ಯ ಸಂರಕ್ಷಣೆ/ ಬೆಳೆ ಅಭಿವೃದ್ಧಿ ವಿಷಯದಲ್ಲಿ ಕನಿಷ್ಠ 10 ವರ್ಷದ ಕಾರ್ಯಕ್ಷೇತ್ರ ಅನುಭವ ಹೊಂದಿರಬೇಕು. ಅಭ್ಯರ್ಥಿಗೆ ತಂಡವನ್ನು ಮುನ್ನೆಡೆಸುವ ಗುಣವಿರಬೇಕು.
Technical assistants (1 ಹುದ್ದೆ) ಅರ್ಜಿಗಳನ್ನು ಸಲ್ಲಿಸುವವರು ಕೃಷಿ ವಿಷಯದಲ್ಲಿ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು. ಕೃಷಿ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಇಲ್ಲದಿದ್ದಲ್ಲಿ ಲೈಫ್ ಸೈನ್ಸ್ ವಿಷಯದಲ್ಲಿ ಸಾಮಾನ್ಯ ಪದವಿ ಪಡೆದವರನ್ನು ಪರಿಗಣಿಸಲಾಗುತ್ತದೆ.
ಸಂಶೋಧನೆ ಮತ್ತು ವಿಸ್ತರಣೆ ವಿಷಯದಲ್ಲಿ ಅನುಭವ ಹೊಂದಿದ ಅಭ್ಯರ್ಥಿಗೆ ಆದ್ಯತೆ ಇದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಚಿಕ್ಕಮಗಳೂರು ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ 16/8/2021ರ ಸಂಜೆ 5 ಗಂಟೆಯೊಳಗೆ ರಿಜಿಸ್ಟರ್, ಸ್ಪೀಡ್ ಅಥವ ಕೊರಿಯರ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿಗಳನ್ನು Office of Joint Director of Agriculture, Chikkamagaluru, Karnataka ವಿಳಾಸಕ್ಕೆ ಕಳಿಸಬೇಕು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08262-220494 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಅಥವ [email protected] ವಿಳಾಸಕ್ಕೆ ಇ-ಮೇಲ್ ಕಳಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ chikkamagaluru.nic.in.
ಕಂಪನಿ ಸೆಕ್ರೆಟರಿ ಹುದ್ದೆ ನೇಮಕಾತಿ; ಕರ್ನಾಟಕ ನೀರಾವರಿ ನಿಗಮವು ಕರ್ನಾಟಕ ಸರ್ಕಾರದ ಒಂದು ಉದ್ಯಮವಾಗಿದ್ದು, ಭಾರಿ ಮತ್ತು ಮಧ್ಯಮ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಗಿದೆ. ನೀರಾವರಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿದ್ದು, ತನಗೆ ವಹಿಸಿದ ಯೋಜನೆಗಳ ಅನುಷ್ಠಾನ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿದೆ.
ನಿಗಮದ ನೋಂದಾಯಿತ ಕಛೇರಿಯು ಬೆಂಗಳೂರು ಹಾಗೂ ಕೇಂದ್ರ ಕಛೇರಿ ಧಾರವಾಡದಲ್ಲಿದ್ದು ಇನ್ನಿತರೆ ಅಧೀನ ಕಛೇರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿವೆ. ನಿಗಮದಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ (ಎರಡು ವರ್ಷದ ಗುತ್ತಿಗೆ ಆಧಾರದ ಮೇಲೆ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ವ್ಯವಸ್ಥಪಕ ನಿರ್ದೇಶಕರು, ನೋಂದಾಯಿತ ಕಛೇರಿ, ಬೆಂಗಳೂರು ಇಲ್ಲಿಗೆ ಅರ್ಜಿಯನ್ನು ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು 3/8/2021 ರಿಂದ ಮೇಲಿನ ವಿಳಾಸಕ್ಕೆ ಸಲ್ಲಿಸಬಹುದು. ಕೊನೆಯ ದಿನಾಂಕ 23/8/2021 ಸಂಜೆ 5.30. ಬಳಿಕ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಕೆ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕು. ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು http:\\www.knnlindia.com ಭರ್ತಿ ಮಾಡಿ ಸಲ್ಲಿಸಬೇಕು.












Click it and Unblock the Notifications