• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಅ. 15ರೊಳಗೆ ಅರ್ಜಿ ಹಾಕಿ

|

ಕಲಬುರಗಿ, ಸೆಪ್ಟೆಂಬರ್ 29 : ಪೋಷಣ್ ಅಭಿಯಾನ ಯೋಜನೆಯಡಿ ಅಫಜಲಪುರ ತಾಲೂಕಿನಲ್ಲಿ ಖಾಲಿಯಿರುವ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚಲರ್ ಆಫ್ ಕಂಪ್ಯೂಟರ್ ಸೈನ್ಸ್, ಬಿಸಿಎ, ಬಿ.ಟೆಕ್., ಬಿ.ಇ. ಇನ್ ಐಟಿ, ಸಾಫ್ಟ್‌ವೇರ್ ಅಪ್ಲಿಕೇಶನ್/ ಐಸಿಟಿ ವಿಭಾಗಗಳಲ್ಲಿ ಪದವೀಧರರಾಗಿರಬೇಕು.

ಆರೋಗ್ಯ ಇಲಾಖೆ ನೇಮಕಾತಿ; ಅಕ್ಟೋಬರ್ 15ರ ತನಕ ಅರ್ಜಿ ಹಾಕಿಆರೋಗ್ಯ ಇಲಾಖೆ ನೇಮಕಾತಿ; ಅಕ್ಟೋಬರ್ 15ರ ತನಕ ಅರ್ಜಿ ಹಾಕಿ

ಅಭ್ಯರ್ಥಿಗಳು ಟೆಕ್ನಾಲಾಜಿ ಆಂಡ್ ಸಾಫ್ಟವೇರ್ ಅಪ್ಲಿಕೇಶನ್ ಸಪೋರ್ಟ್‍ನಲ್ಲಿ ಕರ್ತವ್ಯ ನಿರ್ವಹಿಸಿರುವ ಮತ್ತು ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗಿರಬೇಕು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಸ್ಥಗಿತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಸ್ಥಗಿತ

ಇದು ಕೇಂದ್ರ ಪುರಸ್ಕೃತ ಯೋಜನೆಯಾಗಿರುವುದರಿಂದ ಕನ್ನಡ ಮತ್ತು ಇಂಗ್ಲೀಷ್ ಜ್ಞಾನ ಅಗತ್ಯವಾಗಿದೆ. ಕಲಬುರಗಿ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ; ಆಯುಷ್ ಇಲಾಖೆ ನೇಮಕಾತಿ, ಅರ್ಜಿ ಹಾಕಿ ಶಿವಮೊಗ್ಗ; ಆಯುಷ್ ಇಲಾಖೆ ನೇಮಕಾತಿ, ಅರ್ಜಿ ಹಾಕಿ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು 2020ರ ಅಕ್ಟೋಬರ್ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08472-278659 ಸಂಖ್ಯೆಗೆ ಕರೆ ಮಾಡಬಹುದು. ಅರ್ಜಿಗಳನ್ನು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

English summary
Applications invited by the candidates for the coordinator post under Poshan abhiyaan in Kalaburagi district Afzalpur taluk. Candidates can apply till October 15, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X