ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ

ಕಲಬುರಗಿ, ಸೆಪ್ಟೆಂಬರ್ 04: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿ ಕೌನ್ಸಿಲರ್ ಹುದ್ದೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 10ರೊಳಗೆ ಅರ್ಜಿ ಸಲ್ಲಿಸಬೇಕು.

ಕಲಬುರಗಿ ಜಿಲ್ಲೆಯಲ್ಲಿ ಖಾಲಿಯಿರುವ ಕೌನ್ಸಿಲರ್ (1 ಹುದ್ದೆ) ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ತಾತ್ಕಾಲಿಕವಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಯಾವುದಾದರೊಂದು ವಿಷಯದಲ್ಲಿ ಪದವಿ ಹೊಂದಿರಬೇಕು. ಎಂ. ಎಸ್ .ಡಬ್ಲ್ಯೂ, ಎಂ.ಎ. ಮಹಿಳಾ ಅಧ್ಯಯನ ಆದವರಿಗೆ ಆದ್ಯತೆಯನ್ನು ನೀಡಲಾಗುತ್ತದೆ.

Apply For Counselor Post In Kalaburagi District

ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ 3 ರಿಂದ 5 ವರ್ಷಗಳ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಅಭ್ಯರ್ಥಿಯು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರವಾಸ ಕೈಗೊಳ್ಳಲು ದೈಹಿಕ ಸಾಮರ್ಥ್ಯ ಹೊಂದಿರಬೇಕು. ಈ ಹುದ್ದೆಯು ತಾತ್ಕಾಲಿಕವಾಗಿದ್ದು, ನಿಗದಿತ ಮಾಸಿಕ ಗೌರವಧನ 12,000 ರೂ. ಹಾಗೂ 2000 ರೂ.ಗಳ ಪ್ರಯಾಣ ಭತ್ಯೆ ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ದೃಢೀಕೃತ ಪ್ರಮಾಣ ಪತ್ರ ಹಾಗೂ ಮಹಿಳಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವದ ಮೂಲ ಪ್ರಮಾಣ ಪತ್ರಗಳು ಹಾಗೂ ಇತರೆ ಹೆಚ್ಚುವರಿ ಅನುಭವದ ದಾಖಲಾತಿಗಳನ್ನು ಅರ್ಜಿಯೊಂದಿಗೆ ಕಳಿಸಬೇಕು.

ಅಭ್ಯರ್ಥಿಗಳು ಅರ್ಜಿಗಳನ್ನು ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ 10ರೊಳಗೆ ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+