ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 1121 ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಭರ್ತಿ

ಬೆಂಗಳೂರು, ಮೇ 10 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮೊದಲು 1,916 ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕಾತಿಗೆ ಸೂಚನೆ ನೀಡಲಾಗಿತ್ತು. ಈಗ ಪರಿಷ್ಕೃತ ಆದೇಶದಂತೆ ಪಟ್ಟು 1,121 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಸೂಚನೆ ಕೊಟ್ಟಿದ್ದಾರೆ.

ಅಟಲ್ ಜೀ ಜನಸ್ನೇಹಿ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆಯುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಕರ್ನಾಟಕ 14 ಜಿಲ್ಲೆಗಳಲ್ಲಿ ನೇಮಕಾತಿ ನಡೆಯಲಿದೆ.

Apply For Data Entry Operator Jobs At Atalji Janasnehi Kendra

ಹುದ್ದೆಗಳ ವಿವರ: ಚಾಮರಾಜನಗರ 22, ಚಿಕ್ಕಮಗಳೂರು 44, ಚಿತ್ರದುರ್ಗ 31, ದಕ್ಷಿಣ ಕನ್ನಡ 27, ಧಾರವಾಡ 24, ಗದಗ 21, ಹಾವೇರಿ 33, ಕೊಪ್ಪಳ 28, ಮಂಡ್ಯ 55, ಮೈಸೂರು 47, ರಾಯಚೂರು 45, ರಾಮನಗರ 23, ಶಿವಮೊಗ್ಗ 52, ಉತ್ತರ ಕನ್ನಡ 52 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ ಅಂಗೀಕೃತಗೊಂಡ ಕಂಪ್ಯೂಟರ್ ತರಬೇತಿ ಕೇಂದ್ರಗಳಿಂದ ಟ್ರೈನಿಂಗ್ ಪಡೆದು, ಪ್ರಮಾಣ ಪತ್ರ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು.

ಈ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿಗಳು ಶೀಘ್ರದಲ್ಲಿಯೇ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+