ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ

ಬೆಂಗಳೂರು, ಸೆಪ್ಟೆಂಬರ್ 30: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 27 ಅಕ್ಟೋಬರ್ 2021 ಕೊನೆಯ ದಿನವಾಗಿದೆ.

ಬಿಎಂಆರ್‌ಸಿಎಲ್ ಡೆಪ್ಯೂಟಿ ಜನರಲ್ ಮ್ಯಾನೇಜರ್ 3, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 85000-125000 ಪ್ರತಿ ತಿಂಗಳು.

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ವಾಣಿಜ್ಯ ವಿಷಯದಲ್ಲಿ ಪದವಿ, ಸಿಎ, ಸಿಎಂಎ ಪದವಿಯನ್ನು ಪಡೆದಿರಬೇಕು. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ವಾಣಿಜ್ಯ ವಿಷಯದಲ್ಲಿ ಪದವಿ, ಎಂಬಿಎ, ಎಂಕಾಂ, ಸಿಎ-ಇಂಟರ್, ಸಿಎಂಎ-ಇಂಟರ್ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

Apply For Deputy General Manager Assistant General Manager Post At BMRCL

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ 50 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ ವಯೋಮಿತಿ 45 ವರ್ಷಗಳು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಮಾಸಿಕ 12500 ರೂ. ಮಾಸಿಕ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ 85000 ರೂ. ಮಾಸಿಕ ವೇತನ ನಿಗದಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು bmrc.co.in ವೆಬ್ ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಳಿಕ ಅರ್ಜಿಗಳನ್ನು ಅಗತ್ಯ ದಾಖಲೆಗಳ ಜೊತೆ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಕಳಿಸಲು ವಿಳಾಸ; General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bangalore - 560027.

ಅರ್ಜಿಗಳನ್ನು ಸಲ್ಲಿಸುವಾಗ ಗೊಂದಲಗಳು ಉಂಟಾದರೆ [email protected] ವಿಳಾಸಕ್ಕೆ ಇ-ಮೇಲ್ ಕಳಿಸಬಹುದಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿ; ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ/ ಅರೆಕಾಲಿಕ ಅತಿಥಿ ಉಪನ್ಯಾಸಕ ಹಾಗೂ ಗ್ರಂಥಾಲಯ ವಿಭಾಗಗಳಲ್ಲಿ ಸಹಾಯಕ ಗ್ರಂಥಪಾಲಕರು ಮತ್ತು ಕ್ರೀಡಾ , ದೈಹಿಕ ಮತ್ತು ಸಾಂಸ್ಕೃತಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಕ್ರೀಡಾನಿರ್ದೆಶಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಆಯ್ಕೆಯಾದ ಅತಿಥಿ ಉಪನ್ಯಾಸಕರ ಸಂಭಾವನೆಯನ್ನು ವಿಶ್ವವಿದ್ಯಾಲಯದ ನಿಯಮಾನುಸಾರ ನೀಡಲಾಗುತ್ತದೆ. ವಿವಿಧ ವಿಷಯಗಳ ಕಾರ್ಯಾಭಾರ ಅಗತ್ಯತೆಗನುಗುಣವಾಗಿ ಹಾಗೂ ಸದ್ಯ ಜಾರಿಯಲ್ಲಿರುವ ಸರ್ಕಾರದ ಮೀಸಲಾತಿ ಮತ್ತು ಯುಜಿಸಿ ನಿಯಮಾನುಸಾರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16ರ ಒಳಗಾಗಿ ಅರ್ಜಿಯನ್ನು ಸಂಬಂಧಪಟ್ಟ ವಿಭಾಗಗಳಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ, ವಿದ್ಯಾರ್ಹತೆ, ವಿಭಾಗಗಳ ವಿವರ ಹಾಗೂ ಇನ್ನಿತರ ಮಾಹಿತಿಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.vskub.ac.in ನಲ್ಲಿ ಪಡೆಯಬಹುದು.

ತರಬೇತಿಗೆ ಅರ್ಜಿ ಆಹ್ವಾನ; ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಸರ್ಕಾರಿ ಟೂಲ್ ರೂಮ್ ಮತ್ತು ಟ್ರೈನಿಂಗ್ ಸೆಂಟರ್‌ ಡಿಪ್ಲೋಮಾ ಇನ್ ಟೂಲ್ ಅಂಡ್ ಮೇಕಿಂಗ್ ತರಬೇತಿಗೆ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಹಾಗೂ ಪಿಯುಸಿ ವಿಜ್ಞಾನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಎಸ್‌ಎಸ್‌ಎಲ್‌ಸಿ ಪಾಸಾದ ಆಸಕ್ತ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನೂ ಕೆಲವೇ ಸೀಟುಗಳು ಲಭ್ಯವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.

ಐಟಿಐ ಮತ್ತು ಪಿಯುಸಿ ವಿಜ್ಞಾನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎರಡನೇಯ ವರ್ಷಕ್ಕೆ ನೇರ ಪ್ರವೇಶ ನೀಡಲಾಗುವುದು. ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಅರ್ಜಿಗಳನ್ನು ಪ್ರಾಂಶುಪಾಲರಿಂದ ಖುದ್ದಾಗಿ ನಗದು ಅಥವಾ ಅಂಚೆ ಮೂಲಕ ಕ್ರಾಸ್ ಮಾಡಿದ ರೂ. 250 ಡಿಡಿ (ಎಸ್.ಸಿ./ ಎಸ್.ಟಿ ಮತ್ತು ವರ್ಗ-1 ವಿದ್ಯಾರ್ಥಿಗಳಿಗೆ ರೂ.125 ಮಾತ್ರ) ಸಲ್ಲಿಸಿ ಪಡೆಯಬಹುದು.

ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜಿ.ಟಿ.ಟಿ.ಸಿ ಮರಿಯಮ್ಮನಹಳ್ಳಿಯ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಹಿತಿಗಾಗಿ ಪ್ರಾಚಾರ್ಯರನ್ನು ಸಂಪರ್ಕಿಸಬಹುದುದ. ದೂರವಾಣಿ ಸಂಖ್ಯೆ 8073979750.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+