• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಎಸ್‌ಎನ್‌ಎಲ್ ನೇಮಕಾತಿ; ನ.20ರ ತನಕ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ನವೆಂಬರ್ 15; ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 20 ಕೊನೆಯ ದಿನವಾಗಿದೆ.

ಬಿಎಸ್‌ಎನ್‌ಎಲ್ 27 ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಭೋಪಾಲ್, ಇಂದೋರ್, ಗ್ವಾಲಿಯರ್, ಜಬಲ್ಪುರ್‌ನಲ್ಲಿ ಕೆಲಸ ಮಾಡಬೇಕಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 8000 ರೂ. ಮಾಸಿಕ ಸ್ಪೈಫಂಡ್ ನೀಡಲಾಗುತ್ತದೆ. ಭೋಪಾಲ್ 5, ಇಂಧೋರ್ 4, ಗ್ವಾಲಿಯರ್ 3, ಜಬಲ್ಪುರ್‌ 3, ಸಾಗರ್ 3, ಉಜ್ಜೈನಿ 3 ಸೇರಿದಂತೆ ವಿವಿಧ ನಗರದಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ

ಬಿಎಸ್‌ಎನ್‌ಎಲ್ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್, ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ ಪದವಿ ಪಡೆದಿರಬೇಕು. 30 ನವೆಂಬರ್ 2021ಕ್ಕೆ ಅಭ್ಯರ್ಥಿ 25 ವರ್ಷ ಪೂರ್ಣಗೊಳಿಸಿರಬೇಕು. ಒಬಿಸಿ ಅಭ್ಯರ್ಥಿಗೆ 3, ಎಸ್‌ಸಿ/ ಎಸ್‌ಟಿ/ ಅಂಗವಿಕಲ ಅಭ್ಯರ್ಥಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಕೊಪ್ಪಳ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ ಕೊಪ್ಪಳ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿ ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು.

ಶಿವಮೊಗ್ಗ; ಕೆಲಸ ಖಾಲಿ ಇದೆ, ಡಿ. 8ರೊಳಗೆ ಅರ್ಜಿ ಹಾಕಿ ಶಿವಮೊಗ್ಗ; ಕೆಲಸ ಖಾಲಿ ಇದೆ, ಡಿ. 8ರೊಳಗೆ ಅರ್ಜಿ ಹಾಕಿ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು http://portal.mhrdnats.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಕುರಿ, ಮೇಕೆ ಸಾಕಾಣಿಕೆಗೆ ಸಹಾಯಧನ; ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ದಾವಣಗೆರೆ ವತಿಯಿಂದ 2021-22ನೇ ಸಾಲಿನಲ್ಲಿ ಆರ್. ಕೆ. ವಿ. ವೈ ಯೋಜನೆಯಡಿ ಕುರಿ/ ಮೇಕೆ ಘಟಕ (10+01) ಸ್ಥಾಪನೆಗಾಗಿ ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ದಾವಣಗೆರೆ ಜಿಲ್ಲೆಗೆ ಒಟ್ಟು ಗುರಿ 10 ಘಟಕಗಳ ಅನುಷ್ಠಾನದ ಗುರಿ ನಿಗದಿಪಡಿಸಲಾಗಿದ್ದು, ಈ ಪೈಕಿ ಪರಿಶಿಷ್ಟ ಜಾತಿ 2, ಪರಿಶಿಷ್ಟ ಪಂಗಡ 1, ಸಾಮಾನ್ಯ ವರ್ಗದವರಿಗೆ 7 ಘಟಕ ಮಂಜೂರಾತಿಗೆ ಗುರಿ ನಿಗದಿಪಡಿಸಿದೆ.

ಈ ಯೋಜನೆಯು ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ 18 ರಿಂದ 60 ವರ್ಷ ವಯೋಮಿತಿಯ ಪುರುಷ ಸದಸ್ಯರನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ, ತಾಲೂಕುಗಳಲ್ಲಿಯೂ ಸಹ, ಕುರಿ ಸಾಕಾಣಿಕೆದಾರರನ್ನು ಫಲಾನುಭವಿಗಳನ್ನಾಗಿ ಸರ್ಕಾರದಿಂದ ರಚಿಸಲಾಗಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

ಯೋಜನೆಯಡಿ ಈ ಹಿಂದೆ ಸಹಾಯಧನ ಪಡೆದಿರುವ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಪುನರ್ ಆಯ್ಕೆ ಮಾಡಲಾಗುವುದಿಲ್ಲ. ಯೋಜನೆಗೆ ಸಂಬಂಧಿಸಿದ ನಿಗದಿತ ಅರ್ಜಿಗಳನ್ನು ಆಯಾ ತಾಲೂಕು ಮಟ್ಟದ ಸಹಾಯಕ ನಿರ್ದೇಶಕರು/ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವರಿಂದ ಪಡೆದು ಭರ್ತಿಮಾಡಿದ ಅರ್ಜಿಯನ್ನು ನವೆಂಬರ್ 24 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯನ್ನು ನಿಗದಿತ ನಮೂನೆಯಲ್ಲಿ (ತ್ರಿಪ್ರತಿ), ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ದೃಢೀಕೃತ ಪ್ರತಿ, ಪಡಿತರ ಚೀಟಿ, ಸಂಘದ ಸಭಾ ನಡವಳಿಗಳ ಪ್ರತಿ ಮತ್ತು ಸದಸ್ಯತ್ವದ ಪ್ರತಿ, ಕುರಿ/ ಮೇಕೆ ಪಾಸ್ ಪುಸ್ತಕದ ಪ್ರತಿ, ಕುರಿ/ ಮೇಕೆ ಸಾಕಾಣಿಕೆಯಲ್ಲಿ ತರಬೇತಿ ಹೊಂದಿದ್ದಲ್ಲಿ ದಾಖಲೆ ಲಗತ್ತಿಸಿ ನವೆಂಬರ್ 24ರ ಒಳಗಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿಯನ್ನು ಆಯಾ ತಾಲ್ಲೂಕುಗಳ ಪಶು ಆಸ್ಪತ್ರೆ, ಸಹಾಯಕ ನಿರ್ದೇಶಕರು (ಆಡಳಿತ) ಪಶುಪಾಲನಾ ಇಲಾಖೆ ಇವರಿಂದ ಪಡೆಯಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಅರುಣ ಟಾಕೀಸ್ ಎದುರು, ಪಿ.ಬಿ. ರಸ್ತೆ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು

English summary
Bharat Sanchar Nigam Limited (BSNL) invited applications for diploma apprentice posts. Candidates can apply online till 20th November 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion