ಶಿಷ್ಯ ವೇತನ ಸಹಿತ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ, ವಿವರ
ಬೆಂಗಳೂರು, ಮೇ 27: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಕಲಬುರಗಿಯಲ್ಲಿರುವ ಕರ್ನಾಟಕ ಇನ್‍ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯಲ್ಲಿ ಶಿಷ್ಯ ವೇತನ ಸಹಿತ ತರಬೇತಿಯನ್ನು ನೀಡುತ್ತಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/ 180 ದಿನಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ನೀಡಲಾಗುತ್ತಿದೆ. ಜುಲೈನಿಂದ ಈ ತರಬೇತಿ ಪ್ರಾರಂಭವಾಗಲಿದೆ.

ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.
ವಯೋಮಿತಿ, ಶಿಷ್ಯ ವೇತನ ವಿವರ: ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು 16 ವರ್ಷದ ವಯೋಮಿತಿ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿರುತ್ತದೆ. ಕನಿಷ್ಟ ವಿದ್ಯಾರ್ಹತೆ ಎಸ್ಎಸ್ಎಲ್‌ಸಿ ಅಥವಾ ತತ್ಸಮಾನ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಶಿಷ್ಯವೇತನ ನೀಡಲಾಗುವುದು.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು/ 180 ದಿನಗಳ ವಿಶೇಷ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕನಿಷ್ಠ ಎಸ್ಎಸ್ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುತ್ತದೆ.
ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿಂದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್‍ಗಳಲ್ಲಿ (ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ, ಅರ್ಜಿ ಪಡೆಯುವ ಮತ್ತು ಕಳುಹಿಸುವ ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಆದರ್ಶ ನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ, ಕಲಬುರಗಿ-585105. ದೂರವಾಣಿ ಸಂಖ್ಯೆ 08472-245340, ಮೊ.9916726886, ಮೊ.9742307153, ಮೊ.9113916753.












Click it and Unblock the Notifications