ಉತ್ತರ ಕನ್ನಡದಲ್ಲಿ ಕೆಲಸ ಖಾಲಿ ಇದೆ: ಮಾರ್ಚ್ 28ರ ತನಕ ಅರ್ಜಿ ಹಾಕಿ
ಕಾರವಾರ, ಮಾರ್ಚ್ 20: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಗುತ್ತಿಗೆ ಆಧಾರದ ಮೇಲೆ ಹುದ್ದೆಯ ಭರ್ತಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಾರ್ಚ್ 28ರ ಸಂಜೆ 6 ಗಂಟೆಯ ಒಳಗೆ ಖುದ್ದಾಗಿ ಅಥವ ಅಂಚೆಯ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತಿಯಿರುವ ಅಭ್ಯರ್ತಿಗಳು ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿApplication for the post of Disaster Professional ಎಂದು ಬರೆದು ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 48,400 ಪ್ರತಿ ತಿಂಗಳು (ಎಲ್ಲಾ ತೆರಿಗೆ ಸೇರಿ). ಅಭ್ಯರ್ಥಿ ಸಂಚಾರ ನಡೆಸುವುದಕ್ಕೆ ನಿಯಮಗಳ ಅನ್ವಯ ಭತ್ಯೆ ಸಿಗಲಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ: ಜಿಲ್ಲಾಧಿಕಾರಿಗಳ ಕಾರ್ಯಾಲಯ, ಉತ್ತರ ಕನ್ನಡ ಕಾರವಾರ. ಅರ್ಜಿಗಳನ್ನು ಸಲ್ಲಿಕೆ ಮಾಡಲು ದಿನಾಂಕ 28/03/2025ರ ಸಂಜೆ 6 ಗಂಟೆ ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲಾ ವೆಬ್‌ಸೈಟ್‌ಗೆ ಭೇಟಿ ನೀಡಿ https://uttarakannada.nic.in/en/notice_category/recruitment/ ಮೂಲಕ ಮಾಹಿತಿ ಪಡೆಯಬಹುದು.
ಯಾರು ಅರ್ಜಿ ಸಲ್ಲಿಕೆ ಮಾಡಬಹುದು?
* ಅರ್ಜಿ ಸಲ್ಲಿಕೆ ಮಾಡುವವರು ಭೂವಿಜ್ಞಾನ, ಪರಿಸರ ವಿಜ್ಞಾನ ಮತ್ತು ವಿಪತ್ತು ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
* ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಸಾಮಾಜಿಕ ವಿಜ್ಞಾನ/ ಗ್ರಾಮೀಣ ಅಭಿವೃದ್ಧಿ/ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಯಾವುದೇ ಅಭ್ಯರ್ಥಿಯನ್ನು, ಅವರು ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿ ವಿಶೇಷ ಶೈಕ್ಷಣಿಕ ಹಿನ್ನೆಲೆ/ ಕೆಲಸದ ಅನುಭವ ಹೊಂದಿದ್ದರೆ ಮಾತ್ರ ಪರಿಗಣಿಸಲಾಗುವುದು.
* ಕನಿಷ್ಠ 3 ವರ್ಷಗಳ ವಿಪತ್ತು ನಿರ್ವಹಣೆಯ ಯಾವುದೇ ಅಂಶದಲ್ಲಿ ಸಂಬಂಧಿತ ಕೆಲಸದ ಅನುಭವ ಇರಬೇಕು. ವಿಪತ್ತು ನಿರ್ವಹಣೆಯಲ್ಲಿ ಸಂಬಂಧಿತ ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
* ವೃತ್ತಿಪರರು DDMP (ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ) ಮತ್ತು ಭಾರತೀಯ ವಿಪತ್ತು ಸಂಪನ್ಮೂಲ ಜಾಲ (IDRN) ಬಗ್ಗೆ ತಿಳಿದಿರಬೇಕು.
* ವೃತ್ತಿಪರರು DM ಕಾಯ್ದೆ, 2005 ಮತ್ತು ವಿವಿಧ ವಿಪತ್ತುಗಳ ಕುರಿತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳು (NDMA) ಬಗ್ಗೆ ಚೆನ್ನಾಗಿ ತಿಳಿದಿರಬೇಕು.
* ಅಭ್ಯರ್ಥಿಯು ಬಲವಾದ ಸಂವಹನ ಮತ್ತು ಪ್ರಸ್ತುತೀಕರಣ ಕೌಶಲ್ಯಗಳನ್ನು ಹೊಂದಿರಬೇಕು ಮತ್ತು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರಿಣತಿ ಹೊಂದಿರಬೇಕು.
* ಅಭ್ಯರ್ಥಿಯು MS ಆಫೀಸ್ ಮತ್ತು ಇಂಟರ್‌ನೆಟ್ ಅಪ್ಲಿಕೇಶನ್‌ಗಳ ಉತ್ತಮ ಕಾರ್ಯನೈಪುಣ್ಯವನ್ನು ಹೊಂದಿರಬೇಕು.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ












Click it and Unblock the Notifications