ಕಲಬುರಗಿ : ಜಿಲ್ಲಾ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ, ಏ. 15 : ಕಲಬುರಗಿ ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಖಾಲಿಯಿರುವ ಜಿಲ್ಲಾ ಸಮಾಲೋಚಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 18.

ಎಚ್.ಆರ್.ಡಿ., ಐ.ಇ.ಸಿ., ಎಸ್.ಡಿ.ಸಿ. ಮತ್ತು ಎಂ.ಐ.ಎಸ್ ತಲಾ ಒಂದು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

kalaburagi

ಅಭ್ಯರ್ಥಿಗಳು ನೀರು ಮತ್ತು ನೈರ್ಮಲ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಅನುಭವ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಭರ್ತಿ ಮಾಡಿದ ಅರ್ಜಿಗಳನ್ನು ಏ.18ರೊಳಗೆ ಜಿಲ್ಲಾ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯ ನಮೂನೆ, ವಿದ್ಯಾರ್ಹತೆ ಸೇರಿದಂತೆ ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ತರಬೇತಿಗೆ ಅರ್ಜಿ ಆಹ್ವಾನ : ಮೈಸೂರು ನಗರದ ಕೆ.ಆರ್.ಎಸ್ ರಸ್ತೆಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮ, ಬಿಇ ವಿದ್ಯಾರ್ಹತೆ ಹೊಂದಿರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

12, 6 ಮತ್ತು 4ತಿಂಗಳ ವಿವಿಧ ಕೋರ್ಸಗಳಾದ ಟೂಲ್‍ರೂಂ ಮೆಷಿನಿಷ್ಟ್, ಟರ್ನರ್, ಮಿಲ್ಲರ್, ಗ್ರೈಂಡರ್, ಟೆಕ್ನಾಲಜಿ, ಕ್ಯಾಡ್ ಕೋರ್ಸ್‍ನ ತಾಂತ್ರಿಕ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ ಮತ್ತು ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಮಾಸಿಕ ರೂ.1,500/- ಶೀಷ್ಯವೇತನ ದೊರೆಯಲಿದೆ.

ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಹಾಗೂ ವಿಳಾಸ, ಜಾತಿ ಮತ್ತು ಇತರೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 9738606772, 9035376071 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+