ಕೊಪ್ಪಳ; ಕೆಲಸ ಖಾಲಿ ಇದೆ, ವೇತನ 44,000 ರೂ.ಗಳು

ಕೊಪ್ಪಳ, ನವೆಂಬರ್ 05: ಕೊಪ್ಪಳ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 11ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾ ವಿಪತ್ತು ಪರಿಣಿತರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂದು ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷ ಕೆಲಸ ಮಾಡಲು ಅವಕಾಶವಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,000 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ/ ಸಮಾಜ ವಿಜ್ಞಾನ/ ಗ್ರಾಮೀಣಾಭಿವೃದ್ಧಿ/ ಪರಿಸರ ವಿಜ್ಞಾನ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.

Apply For District Disaster Professional Post In Koppal

ನಿಗದಿಪಡಿಸಿದ ಕ್ಷೇತ್ರದಲ್ಲಿ 3 ರಿಂದ 5 ವರ್ಷಗಳ ಕಾಲ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇರಬೇಕು. ಉತ್ತಮ ಸಂವಹನ ಕೌಶಲ್ಯವಿದ್ದು ಕನ್ನಡ ಮತ್ತು ಇಂಗ್ಲಿಶ್ ಭಾಷೆ ಚೆನ್ನಾಗಿ ಬರಬೇಕು. ಎಂಎಸ್ ಆಫೀಸ್, ಇಂಟರ್‌ನೆಟ್ ಅಪ್ಲಿಕೇಶನ್‌ಗಳಲ್ಲಿ ಕಾರ್ಯ ನಿರ್ವಹಣೆ ಮಾಡಲು ಬರಬೇಕು.

ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ವೆಬ್‌ಸೈಟ್ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+