ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನ; ಜಿಲ್ಲಾ ಸಂಪನ್ಮೂಲ ವ್ಯಕ್ತಿ ನೇಮಕಾತಿ, ಅರ್ಜಿ ಹಾಕಿ

|
Google Oneindia Kannada News

ಹಾಸನ, ಸೆಪ್ಟೆಂಬರ್ 29: ಹಾಸನ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 22ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ ಹೊಸದಾಗಿ ಪ್ರಾರಂಭಿಸಿದೆ.

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?

ಈ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನಲೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ 5 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ ಜಲಸಂಪನ್ಮೂಲ ಇಲಾಖೆಯಲ್ಲಿ 5 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ

Apply For District Resource Person Post At Hassan

ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ನೀಡಲಾಗುವುದಿಲ್ಲ. ಆದರೆ ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಹಣ ಪಾವತಿಯನ್ನು ಅವರು ಬೆಂಬಲಿಸಿರುವಂತಹ ಪ್ರತಿ ಫಲಾನುಭವಿಯನ್ನು ಆಧರಿಸಿ ಬ್ಯಾಂಕ್‍ನಿಂದ ಸಾಲ ಮಂಜೂರಾತಿ ಆದ ನಂತರ ಬ್ಯಾಂಕ್‍ನಿಂದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ ರೂ. 20000 ಗಳನ್ನು 2 ಕಂತುಗಳಲ್ಲಿ ಪಾವತಿಸಲಾಗುವುದು.

ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ; ಆಸಕ್ತರು ಅರ್ಜಿ ಹಾಕಿಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ; ಆಸಕ್ತರು ಅರ್ಜಿ ಹಾಕಿ

ಈ ಪೈಕಿ ಶೇ 50 ಮೊತ್ತವನ್ನು ಬ್ಯಾಂಕಿನಿಂದ ಸಾಲ ಮಂಜೂರಾದ ನಂತರ ಹಾಗೂ ಉಳಿದ ಶೇ 50 ಹಣವನ್ನು ಘಟಕಗಳು ಜಿಎಸ್‍ಟಿ ಮತ್ತು ಉದ್ಯೋಗ ಆಧಾರ್ ನೋಂದಣಿಗಳನ್ನು ಪಡೆದ ನಂತರ ಎಫ್. ಎಸ್. ಎಸ್. ಎ. ಐ ವತಿಯಿಂದ ಪ್ರಮಾಣಿತ ಅನುಸರಣೆಯನ್ನು ಪಡೆದ ನಂತರ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಅರ್ಹತೆ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಆಹಾರ ತಂತ್ರಜ್ಞಾನ/ ಆಹಾರ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮ/ ಪದವಿಯನ್ನು ಪ್ರತಿಷ್ಠಿತ ರಾಷ್ಟ್ರ/ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪಡೆದಿರಬೇಕು.

ಆಹಾರ ಸಂಸ್ಕರಣ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ದಿ, ಗುಣಮಟ್ಟದ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3 ರಿಂದ 5 ವರ್ಷಗಳ ಅನುಭವನ್ನು ಹೊಂದಿರಬೇಕು.

ಆಹಾರ ಸಂಸ್ಕರಣ ಕೈಗಾರಿಕೆ, ಬ್ಯಾಂಕಿಂಗ್ ಡಿಪಿಆರ್ ಸಿದ್ದಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಯನ್ನು ಪರಿಗಣಿಸಲಾಗುತ್ತದೆ. ಅಕ್ಟೋಬರ್ 22ರೊಳಗಾಗಿ ಆಸಕ್ತರು ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಹಾಸನ ಕಛೇರಿಗೆ ಸಲ್ಲಿಸಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹು.

ಅಪ್ರೆಂಟಿಸ್ ಮೇಳ; ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ ಅಕ್ಟೋಬರ್ 4 ರಂದು ಮೆಗಾ ಅಪ್ರೆಂಟಿಸ್‍ಶಿಪ್ ಮೇಳವನ್ನು ಮೈಸೂರಿನ ಎನ್. ಆರ್. ಮೊಹಲ್ಲಾದಲ್ಲಿ ಆಯೋಜನೆ ಮಾಡಲಾಗಿದೆ.

ಮೇಳದಲ್ಲಿ ವಿವಿಧ ಪ್ರತಿಷ್ಠಿತ ಉದ್ದಿಮೆಗಳು ಪಾಲ್ಗೊಳ್ಳುತ್ತಿವೆ. ಐ. ಟಿ. ಐ ಉತ್ತೀರ್ಣರಾದ ಅಭ್ಯರ್ಥಿಗಳು ಭಾಗವಹಿಸಿ ಮೇಳದ ಪ್ರಯೋಜನ ಪಡೆದುಕೊಳ್ಳಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಉಪಪ್ರಚಾರ್ಯರಾದ ಎಂ. ಜಯೇಂದ್ರ ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8792426277.

ಅರ್ಜಿ ಆಹ್ವಾನ; ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಪಶುಭಾಗ್ಯ ಫಲಾನುಭವಿ ಆಧಾರಿತ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ ಎಂದು ಅನುಷ್ಠಾನಗೊಳಿಸಲಾಗುತ್ತಿದೆ.

ಹಾಸನ ಜಿಲ್ಲೆಯ ಸಾಮಾನ್ಯ ವರ್ಗದ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರಿಗೆ ಸರ್ಕಾರದ ಸಹಾಯಧನದೊಂದಿಗೆ (ಘಟಕದ ವೆಚ್ಚ 62000 ರೂ. / ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇಕಡ 33.3 ರಷ್ಟು ಸಹಾಯಧನ ಮತ್ತು ಸಾಮಾನ್ಯ ವರ್ಗಕ್ಕೆ ಶೇಕಡ ಶೇ. 25 ರಷ್ಟು ಸಹಾಯಧನ) ಹಾಲು ಕರೆಯುವ ಒಂದು ಮಿಶ್ರತಳಿ ಹಸು (ಹೆಚ್.ಎಫ್/ಜರ್ಸಿ) ಎಮ್ಮೆಯನ್ನು ಷರತ್ತು ಮತ್ತು ನಿಬಂಧನೆಗಳೊಂದಿಗೆ ಪಡೆಯಲು ಅರ್ಜಿ ಕರೆಯಲಾಗಿದೆ.

ಆಸಕ್ತ ಕೂಲಿ ಕೃಷಿ ಕಾರ್ಮಿಕರು ಹಾಗೂ ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರು ಫಲಾನುಭವಿ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡುವುದಕ್ಕೆ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶು ಆಸ್ಪತ್ರೆ ಇವರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಅಕ್ಟೋಬರ್ 7 ರೊಳಗೆ ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಇವರನ್ನು ಖುದ್ದಾಗಿ ಭೇಟಿ ಮಾಡಬಹುದು.

English summary
Applications invited for the district resource person post at Hassan. Candidates can apply till October 22, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X