• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಅ.17ರೊಳಗೆ ಅರ್ಜಿ ಹಾಕಿ

|

ಶಿವಮೊಗ್ಗ, ಅಕ್ಟೋಬರ್ 07: ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 17-10-2020 ಕೊನೆಯ ದಿನವಾಗಿದೆ.

ಪ್ರಧಾನಮಂತ್ರಿಗಳ ಕಿರುಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅನುಷ್ಟಾನಕ್ಕಾಗಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಆಹಾರ ತಂತ್ರಜ್ಞಾನ/ಆಹಾರ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ /ಪದವಿ - ಪ್ರತಿಷ್ಠಿತ ರಾಷ್ಟ್ರ /ಅಂತರಾಷ್ಟ್ರೀಯ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪಡೆದಿರಬೇಕು.

ಬಳ್ಳಾರಿ; ಕೆಲಸ ಖಾಲಿ ಇದೆ, ಅ. 15ರೊಳಗೆ ಅರ್ಜಿ ಹಾಕಿ

ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತಿಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3-5 ವರ್ಷಗಳ ಅನುಭವವಿರಬೇಕು.

ಕೋಲಾರ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಹಾಕಿ

ಒಂದು ವೇಳೆ ಆಹಾರ ತಂತ್ರಜ್ಞಾನ ವಿಷಯದಲ್ಲಿ ಅರ್ಹತೆ ಹೊಂದಿರುವ ವ್ಯಕ್ತಿಗಳು ಲಭ್ಯವಾಗದಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆಯಲ್ಲಿ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಗಳನ್ನು ಪರಿಗಣಿಸಲಾಗುತ್ತದೆ.

ಅರ್ಮಿ ಪಬ್ಲಿಕ್ ಸ್ಕೂಲ್ ನೇಮಕಾತಿ: 8000 ಶಿಕ್ಷಕ ಹುದ್ದೆಗಳಿವೆ

ಶಿವಮೊಗ್ಗ ಜಿಲ್ಲೆಗೆ ಇಬ್ಬರು ಜಿಲ್ಲಾ ಸಂಪನ್ಮೂಲ ವ್ಯಕ್ತಿಯನ್ನು ಆಯ್ಕೆ ಮಾಡಲಾಗುತ್ತದೆ. ಇವರಿಗೆ ಯಾವುದೇ ವೇತನ ಇರುವುದಿಲ್ಲ. ಆದರೆ, ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಪಾವತಿಯನ್ನು ಅವರು ಬೆಂಬಲಿಸಿರುವಂತಹ ಪ್ರತಿ ಫಲಾನುಭವಿಯನ್ನು ಆಧರಿಸಿ, ಬ್ಯಾಂಕಿನಿಂದ ಅವರಿಗೆ ಸಾಲ ಮಂಜೂರಾತಿ ಆದ ನಂತರ, ಬ್ಯಾಂಕಿನಿಂದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ ರೂ.20000/- ಗಳನ್ನು 2 ಕುಂತುಗಳಲ್ಲಿ ಪಾವತಿಸಲಾಗುವುದು.

ಈ ಪೈಕಿ ಶೇ 50% ಮೊತ್ತವನ್ನು ಬ್ಯಾಂಕಿನಿಂದ ಸಾಲ ಮಂಜೂರಾದ ನಂತರ ಹಾಗೂ ಉಳಿದ 50% ಹಣವನ್ನು ಘಟಕಗಳು ಜಿಎಸ್‍ಟಿ ಹಾಗೂ ಉದ್ಯೋಗ ಆಧಾರ್ ನೋಂದಣಿಯನ್ನು ಪಡೆದ ನಂತರ ನೀಡಲಾಗುವುದು.

ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಶಾರ್ಟ್ ಲಿಸ್ಟ್ ಮಾಡಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅರ್ಹರನ್ನು ಆಯ್ಕೆ ಮಾಡಲಾಗುವುದು, ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಅತ್ಯವಶ್ಯಕವಾಗಿರುತ್ತದೆ.

ಆಸಕ್ತರು ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿ, ಸೂಕ್ತ ದಾಖಲೆಗಳನ್ನು ಲಗತ್ತಿಸಿ 17/10/2020ರೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ: ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು ಅಥವಾ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಮೊಗ್ಗ ಅಥವಾ ಉಪ ನಿರ್ದೇಶಕರು ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರ ಕಚೇರಿಯನ್ನು ಸಂಪರ್ಕಿಸಬಹುದು.

English summary
Applications invited for the District Resource Person post to implementation for PMFME at Shivamogga district. Candidates can apply till October 17, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X