ಮೈಸೂರಲ್ಲಿ ಕೆಲಸ ಖಾಲಿ ಇದೆ; ಡಿ. 30ರೊಳಗೆ ಅರ್ಜಿ ಹಾಕಿ
ಮೈಸೂರು, ಡಿಸೆಂಬರ್ 21: ಆತ್ಮ ನಿರ್ಭರ ಭಾರತ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಎರಡು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
2020-21ನೇ ಸಾಲಿನಲ್ಲಿ ಆತ್ಮ ನಿರ್ಭರ ಭಾರತ ಯೋಜನೆಯಡಿ 2 ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾ ಮಟ್ಟದಲ್ಲಿ, ಯೋಜನೆಯ ಅನುಷ್ಟಾನದ ಕುರಿತು ಎರಡು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಯಾಗಬೇಕಾಗಿದೆ.
ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣೆ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧ್ದಗೊಳಿಸುವಿಕೆ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಅನುಷ್ಟಾನಗೊಳಿಸುತ್ತದೆ.

ಈ ಯೋಜನೆ ಅನುಷ್ಠಾನಕ್ಕಾಗಿ ಇಬ್ಬರು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ಡಿಸೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8277933104.












Click it and Unblock the Notifications