ಕೊಡಗು: ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ, ವೇತನ ವಿವರ

ಮಡಿಕೇರಿ, ಫೆಬ್ರವರಿ 26: ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 5ರ ಸಂಜೆ 5.30 ಕೊನೆಯ ದಿನವಾಗಿದೆ.

ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯ ಸಂಖ್ಯೆ 1. ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್. ಬಿಸಿಎ, ಎಂಸಿಎ, ಕಂಪ್ಯೂಟರ್ ಸೈನ್ಸ್ ಅಥವಾ ಇನ್‍ಫಾರ್ಮೇಶಷನ್, ಸೈನ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಟೆಲಿಕಾಂ ವಿದ್ಯಾರ್ಹತೆ ಹೊಂದಿರಬೇಕು.

Apply For District Technical Programmer Post At Kodagu

ಯಾವುದೇ ಸರ್ಕಾರಿ ಕಚೇರಿ, ಕಂಪನಿ, ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷವಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ರೂ. 30,053 (ಎಲ್ಲಾ ತೆರಿಗೆ ಹಾಗೂ ಇತ್ಯಾದಿ ಕಡಿತಗೊಳಿಸಿ).

ಅಭ್ಯರ್ಥಿಗಳಿಗೆ ಮಾಹಿತಿ: ಅರ್ಜಿ ಸಲ್ಲಿಕೆ ಮಾಡುವವರು ಭಾರತೀಯ ನಾಗರೀಕರಗಿರತಕ್ಕದ್ದು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷಗಳು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಬಂಧ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರತಕ್ಕದ್ದಲ್ಲ.

ಹುದ್ದೆಯನ್ನು ಒಂದು ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಒಂದು ವರ್ಷದ ಸೇವೆಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ ಅಗತ್ಯವಿದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ವಿಸ್ತರಿಸಲಾಗುವುದು. ಇದನ್ನು ಅಭ್ಯರ್ಥಿಯು ಹಕ್ಕು ಎಂದು ತಿಳಿಯತಕ್ಕದ್ದಲ್ಲ.

ಅಂತಿಮ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಪೂರ್ವದಲ್ಲಿ ಯಾವುದೇ ಕಾರಣ ನೀಡದೆ ಈ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುವ ಅಥವಾ ರದ್ದುಗೊಳಿಸುವ ಸಂಪೂರ್ಣ ಹಕ್ಕನ್ನು ಪ್ರಾಧಿಕಾರವು ಹೊಂದಿರುತ್ತದೆ.

ಅಭ್ಯರ್ಥಿಯ ಸ್ವ-ವಿವರ 10ನೇ ತರಗತಿ ಅಂಕಪಟ್ಟಿ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ/ ದಾಖಲೆಗಳನ್ನು, ನೇಮಕಾತಿ ಆದೇಶಗಳನ್ನು, ಅನುಭವ ಪ್ರಮಾಣ ಪತ್ರ ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಲಗತ್ತಿಸಿ ಕೊನೆಯ ದಿನಾಂಕದೊಳಗೆ ಖುದ್ದಾಗಿ ಅಥವ ನೋಂದಾಯಿತ ಅಂಚೆ ಮೂಲಕ ಸಲ್ಲಿಸುವುದು.

ನಿಗದಿಪಡಿಸಿದ ದಿನಾಂಕ ಮತ್ತು ಸಮಯದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ.

ಅರ್ಜಿ ಆಹ್ವಾನ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ಮಾರ್ಚ್ 4 ರಿಂದ ಪ್ರಾರಂಭವಾಗಲಿದೆ.

ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಈ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ ಅನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆಗಳು 9380162042, 9241482541, 9740982585, 9113880324.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+