• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಂಗಳೂರಲ್ಲಿ ಕೆಲಸ ಖಾಲಿ ಇದೆ; ಮಾರ್ಚ್ 24ರೊಳಗೆ ಅರ್ಜಿ ಹಾಕಿ

|

ಬೆಂಗಳೂರು, ಫೆಬ್ರವರಿ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಡಿಯಲ್ಲಿ 120 ವೈದ್ಯರ ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರ ಒಪ್ಪಿಗೆ ಕೊಟ್ಟಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 24/3/2021 ಕೊನೆಯ ದಿನವಾಗಿದೆ.

ತಜ್ಞ ವೈದ್ಯರು 50, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಫೆಬ್ರವರಿ 22ರಂದು ಬಿಬಿಎಂಪಿ ಈ ಕುರಿತು ವಿವರವಾದ ಪ್ರಕಟಣೆ ಹೊರಡಿಸಿದೆ.

ಚಿಕ್ಕಬಳ್ಳಾಪುರ; ಕೆಲಸ ಖಾಲಿ ಇದೆ, ಫೆ. 28ರೊಳಗೆ ಅರ್ಜಿ ಹಾಕಿ ಚಿಕ್ಕಬಳ್ಳಾಪುರ; ಕೆಲಸ ಖಾಲಿ ಇದೆ, ಫೆ. 28ರೊಳಗೆ ಅರ್ಜಿ ಹಾಕಿ

ಫೆಬ್ರವರಿ 23 ರಿಂದ ಮಾರ್ಚ್ 24ರ ತನಕ ಆಸಕ್ತರು ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿ ಮಾಡಲು 25/3/2021 ಕೊನೆಯ ದಿನವಾಗಿದೆ ಎಂದು ಪ್ರಟಕಣೆ ತಿಳಿಸಿದೆ.

ತುಮಕೂರು ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ ತುಮಕೂರು ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ

ಬಿಬಿಎಂಪಿಯು ಹಿರಿಯ ವೈದ್ಯಾಧಿಕಾರಿ/ ತಜ್ಞರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು (ವಿಶೇಷ) ನಿಯಮಗಳು 2020ರ ನಿಯಮಗಳ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದೆ.

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಬಿಎಂಪಿ ನಿಗದಿದಪಡಿಸಿದ ವಿದ್ಯಾರ್ಹತೆ ಜೊತೆಗೆ ಕಾರ್ಯಾನುಭವವನ್ನು ಹೊಂದಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬಿಬಿಎಂಪಿ ವೆಬ್ ಸೈಟ್‌ಗೆ ಭೇಟಿ ನೀಡಬಹುದು.

   ಇನ್ಮುಂದೆ ಪೆಟ್ರೋಲ್‌ ಬಂಕ್‌, ಅಪಾರ್ಟ್‌ಮೆಂಟ್‌ಗಳಲ್ಲಿ EV ಚಾರ್ಜಿಂಗ್‌ ಸೌಲಭ್ಯ ಕಡ್ಡಾಯವಾಗಲಿದೆ | Oneindia Kannada

   ಅರ್ಜಿ ಶುಲ್ಕದ ವಿವರಗಳು: ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 1000 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿಗೆ ಸೇರಿದ ಅಭ್ಯರ್ಥಿಗಳು 500 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 100 ರೂ. ಶುಲ್ಕ ಪಾವತಿಸಬೇಕು. ಎಸ್‌ಸಿ/ ಎಸ್‌ಟಿ/ ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇದೆ.

   English summary
   Karnataka government approved Bruhat Bengaluru Mahanagara Palike to fill 120 doctors post. Candidates can submit applications till March 24, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X