ಮಡಿಕೇರಿ : ವೈದ್ಯರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ, ನವೆಂಬರ್ 08 : ಕೊಡಗು ಜಿಲ್ಲೆಯಲ್ಲಿನ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಎಂಬಿಬಿಎಸ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ರೋಷ್ಟರ್ ಕಂ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಂಬಿಬಿಎಸ್ ವೈದ್ಯರು ಲಭ್ಯವಿಲ್ಲದಿದ್ದಲ್ಲಿ ಆಯುಷ್ ವೈದ್ಯರನ್ನು ಎಂಬಿಬಿಎಸ್ ವೈದ್ಯರ ಎದುರು ಹುದ್ದೆಗೆ ನೇಮಕ ಮಾಡಲಾಗುತ್ತದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಯನ್ನು ಹಾಗೂ ಇತರ ದಾಖಲಾತಿಗಳನ್ನು ನ. 20 ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಬೇಕು.

ನವೆಂಬರ್ 22 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ನೇರ ಸಂದರ್ಶನಕ್ಕೆ ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.

Apply for doctor post in Primary health centre Kodagu

ಎಂಬಿಬಿಎಸ್ ಪದವಿ ಹಾಗೂ ಭಾರತೀಯ ವೈದ್ಯ ಪದ್ಧತಿಯಲ್ಲಿ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ಪಡೆಯಬಹುದಾಗಿದೆ.

ಎಂಬಿಬಿಎಸ್ ವೈದ್ಯರಿಗೆ ರೂ.45 ಸಾವಿರ ಹಾಗೂ ಆಯುಷ್ ವೈದ್ಯರಿಗೆ ಮಾಸಿಕ ರೂ.26 ಸಾವಿರ ವೇತನ ನಿಗದಿ ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+