ಉಪ ವಲಯ ಅರಣ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಸೆಪ್ಟೆಂಬರ್, 14 : ಕರ್ನಾಟಕ ಅರಣ್ಯ ಇಲಾಖೆ ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳ ಭರ್ತಿಯಾಗಿ ಅರ್ಜಿಯನ್ನು ಆಹ್ವಾನಿಸಿದೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಸೇರಿದ ಅಭ್ಯರ್ಥಿಗಳನ್ನು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ನಿಯಮ 2013ರ ನಿಯಮಗಳಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆ.14ರ ಸೋಮವಾರದಿಂದ ಅಕ್ಟೋಬರ್ 13ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. [ಅರ್ಜಿ ಸಲ್ಲಿಸಲು ವಿಳಾಸ]

jobs

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ವಿಭಾಗಗಳ ಒಟ್ಟು 19 ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹೈದರಾಬಾದ್-ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳು ಸೆ.14ರ ಸೋಮವಾರದಿಂದ ಅಕ್ಟೋಬರ್ 13ರ ಮಧ್ಯಾಹ್ನ 4.30ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗ್ರಾಮ ಲೆಕ್ಕಿಗ ಹುದ್ದೆ ಖಾಲಿ : ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 40 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 23, 2015. [ವಿವರಗಳು ಇಲ್ಲಿವೆ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+