ಉತ್ತರ ಕನ್ನಡ : ಅಬಕಾರಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ಉತ್ತರ ಕನ್ನಡ, ಏ. 23 : ಉತ್ತರ ಕನ್ನಡ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ವಾಹನ ಚಾಲಕರ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 8, 2015.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಇಲಾಖಾ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು.

ಚಾಲ್ತಿಯಲ್ಲಿರುವ ಲಘು ವಾಹನ ಪರವಾನಿಗೆ ಪತ್ರ ಮತ್ತು ಪ್ರಥಮ ಚಿಕಿತ್ಸೆ ದೃಢೀಕರಣ ಪತ್ರವನ್ನು ಹೊಂದಿರಬೇಕು. ಮೀಸಲಾತಿ ಕೋರ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಚಾಲ್ತಿಯಲ್ಲಿರುವ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕಾಗುತ್ತದೆ.
ವಿಶೇಷ ಸೂಚನೆ : ಎರಡೂ ಕಣ್ಣು ಸಂಪೂರ್ಣ ಕ್ಷೇತ್ರ ದೃಷ್ಟಿ ಹೊದಿರಬೇಕು. ವರ್ಣಾಂಧತೆ, ಮೆಳ್ಳೆಗಣ್ಣು ಅಥವ ಯಾವುದೇ ಕಣ್ಣು/ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆ ಎಂದು ಪರಿಗಣಿಸಲಾಗುತ್ತದೆ. [ಅರ್ಜಿ, ನೇಮಕಾತಿ ಆದೇಶ ಇಲ್ಲಿದೆ]
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಟ ವಯೋಮಿತಿ ನಿಗದಿಪಡಿಸಲಾಗಿದೆ. [ತುಮಕೂರು ಕಂದಾಯ ಇಲಾಖೆಯಲ್ಲಿ 70 ಹುದ್ದೆಗಳಿವೆ]
ಅರ್ಜಿ ನಮೂನೆಯನ್ನು uttarakannada.nic.in ವೆಬ್‌ಸೈಟ್ ಮೂಲಕ ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬೇಕಾಗಿದೆ. ಅರ್ಜಿ ಶುಲ್ಕ 5 ರೂ.ನ ಕ್ರಾಸ್ಡ್ ಇಂಡಿಯನ್ ಪೋಸ್ಟಲ್ ಆರ್ಡರ್‌ಅನ್ನು ವಾಹನ ಚಾಲಕ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್, ಉತ್ತರ ಕನ್ನಡ ಜಿಲ್ಲೆ, ಕಾರವಾರ ಇವರ ಹೆಸರಿನಲ್ಲಿ ಪಡೆಯಬೇಕು. ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸಲು ವಿಳಾಸ : ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್, ಅಬಕಾರಿ ಭವನ, ಡಿಸ್ಟಿಲರಿ ಕಾಪೌಂಡ್, ಕೊಡಿಬಾಗ, ಕಾರವಾರ 581303, ಉತ್ತರ ಕನ್ನಡ ಜಿಲ್ಲೆ ಇವರಿಗೆ ಸಲ್ಲಿಸತಕ್ಕದ್ದು.












Click it and Unblock the Notifications