ಕೊಪ್ಪಳ; ಇಂಗ್ಲೀಷ್ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, ಆಗಸ್ಟ್ 04; ಕೊಪ್ಪಳದಲ್ಲಿರುವ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಇಂಗ್ಲೀಷ್ ಶಿಕ್ಷಕರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 19 ಕೊನೆಯ ದಿನವಾಗಿದೆ.
ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಇಂಗ್ಲೀಷ್ ಶಿಕ್ಷಕರ 1 ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಅರೆಕಾಲಿಕ ಆಧಾರದ ಮೇಲೆ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲೀಷ್ ಶಿಕ್ಷಕರ ಒಂದು ಹುದ್ದೆಯನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 10,000 ರೂ.ಗಳು.
ವಯೋಮಿತಿಯ ವಿವರ; ಅರ್ಜಿ ಸಲ್ಲಿಕೆ ಮಾಡುವವರು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಸಂಬಂಧಿಸಿದಂತೆ ಪದವಿ ಪಡೆದಿರಬೇಕು. 24 ರಿಂದ 38ವರ್ಷ ವಯೋಮಿತಿ ಹೊಂದಿರಬೇಕು. ಎಂಎ (ಇಂಗ್ಲೀಷ್) & ಬಿಎಡ್ ವಿದ್ಯಾರ್ಹತೆ ಜೊತೆಗೆ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.
ಗೌರವಧನದ ಆಧಾರದ ಮೇಲೆ 2023-24ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ಅರೆಕಾಲಿಕ ಆಧಾರದ ಮೇಲೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಹುದ್ದೆಯು ಅರೆಕಾಲಿಕ ಹಾಗೂ ತಾತ್ಕಾಲಿಕ ಆಧಾರದಲ್ಲಿದ್ದು, ಯಾವುದೇ ಕಾರಣಕ್ಕೂ ಸಕ್ರಮಗೊಳಿಸುವುದಿಲ್ಲ. ನೇಮಕಗೊಂಡ ಸಿಬ್ಬಂದಿಗಳ ಸೇವೆಯು ಸರ್ಕಾರದ ಅನುದಾನದ ಲಭ್ಯತೆಯ ಆಧಾರದ ಮೇಲಿರುತ್ತದೆ.
ಸ್ಥಳೀಯ ಅಭ್ಯರ್ಥಿಗಳಿಗೆ ಹಾಗೂ ಹೆಚ್ಚಿನ ಶೈಕ್ಷಣಿಕ ಅರ್ಹತೆ ಹೊಂದಿದವರಿಗೆ ಆದ್ಯತೆ ಇರುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ. ಆಸಕ್ತರು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ತಮ್ಮ ಸ್ವವಿವರವನ್ನು ಆಗಸ್ಟ್ 19ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸಲ್ಲಿಸಬೇಕು.
ಆಡಿಯೋ, ವಿಡಿಯೋ ಎಡಿಟಿಂಗ್ ತರಬೇತಿ; ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2023ರ ಆಗಸ್ಟ್ 29ರಿಂದ ಸೆಪ್ಟೆಂಬರ್ 2ರ ತನಕ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳಿಗೆ ಆಡಿಯೋ, ವಿಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರ ಬೆಂಗಳೂರಿನ ಅಕಾಡೆಮಿ ಕಚೇರಿಯಲ್ಲಿ ನಡೆಯಲಿದೆ . ನಡೆಯಲಿದೆ.
ಆಸಕ್ತರು ಅರ್ಜಿಯನ್ನು (https://forms.gle/2qH2JmtMfCBFq7zv5) ಭರ್ತಿ ಮಾಡಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಅಕಾಡೆಮಿಯ ವೆಬ್‍ಸೈಟ್ (kstacademy.in) ನಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29721550. ತರಬೇತಿಯು ಯು. ಆರ್. ರಾವ್ ವಿಜ್ಞಾನ ಭವನ ತೋಟಗಾರಿಕಾ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿಕೆವಿಕೆ ಆವರಣ, ದೊಡ್ಡಬೆಟ್ಟ ಹಳ್ಳಿ ಬಸ್ ನಿಲ್ದಾಣ, ವಿದ್ಯಾರಣ್ಯಪುರ, ಬೆಂಗಳೂರು-560097 ಇಲ್ಲಿ ನಡೆಯಲಿದೆ.












Click it and Unblock the Notifications