ಕೊಪ್ಪಳ ಕೆಲಸ ಖಾಲಿ ಇದೆ; ಸೆಪ್ಟೆಂಬರ್ 8ರೊಳಗೆ ಅರ್ಜಿ ಹಾಕಿ
ಕೊಪ್ಪಳ, ಆಗಸ್ಟ್ 22: ಕೊಪ್ಪಳ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು 8/9/2023 ಕೊನೆಯ ದಿನವಾಗಿದೆ.
ಜಿಲ್ಲೆಯಲ್ಲಿ 4 ಹಳೇಯ ಗ್ರಾಮ ಪಂಚಾಯತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9000 ರೂ. ಗಳ ಗೌರವಧನವನ್ನು ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ಅರ್ಜಿ ನಮೂನೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಲಭ್ಯವಿದೆ.
ಅಭ್ಯರ್ಥಿಗಳಿಗೆ ಷರತ್ತುಗಳು; ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ದಿನಾಂಕ 8/9/2023ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31, 32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರು ಹೊಸಪೇಟೆ ರಸ್ತೆ ಇಲ್ಲಿಗೆ ಕಛೇರಿ ಅವಧಿಯಲ್ಲಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಈ ಹುದ್ದೆಯು ಸಂಪೂರ್ಣವಾಗಿ ಗೌರಧನದ ಆಧಾರದ ಮೇಲೆ ಹಾಗೂ ತಾತ್ಕಾಲಿಕ ಹುದ್ದೆಯಾಗಿರುತ್ತದೆ. ನಿಗದಿಪಡಿಸಿದ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲವೆಂದು ಎಂದು ಸ್ಪಷ್ಟಪಡಿಸಲಾಗಿದೆ.
ಹುದ್ದೆಗಳು ಖಾಲಿ ಇರುವ ಗ್ರಾಮ ಪಂಚಾಯತಿಗಳು. 1. ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮ ಪಂಚಾಯತಿ, 2. ಕುಷ್ಟಗಿ ತಾಲೂಕಿನ ಮೇಣದಾಳ ಗ್ರಾಮ ಪಂಚಾಯತಿ, 3. ಗಂಗಾವತಿ ತಾಲೂಕಿನ ಆಗೋಲಿ ಗ್ರಾಮ ಪಂಚಾಯತಿ. 4. ಕನಕಗಿರಿ ತಾಲೂಕಿನ ಚಿಕ್ಕ ಡಂಕನಕಲ್ ಗ್ರಾಮ ಪಂಚಾಯತಿ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ನಿರುದ್ಯೋಗಿ ಅಂಗವಿಕಲರಾಗಿರಬೇಕು. ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ ಅನುತ್ತೀರ್ಣ ಹೊಂದಿರಬೇಕು. ವಿಶೇಷ ಶಿಕ್ಷಣ, ಆರ್‌ಸಿಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ನೆ ಭಾಷೆ ತರಬೇತಿ, ದೈಹಿಕ ವ್ಯಾಯಾಮ ತರಬೇತಿ ವಿಶೇಷ ಜ್ಞಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇದೆ.
ಅಂಗವಿಕಲರ ಯು. ಡಿ. ಐ. ಡಿ ವಿಶಿಷ್ಠ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ತಹಶೀಲ್ದಾರ್ ಅವರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರವನ್ನು ಅರ್ಜಿಯ ಜೊತೆ ಲಗತ್ತಿಸಬೇಕು.
ವಿಕಲಚೇತನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಅನುಭವವಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಬೇಕು. ಮಹಿಳಾ ವಿಕಲಚೇತನರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್‌ಎಎಲ್ ಹೆಲಿಕಾಪ್ಟರ್ ಘಟಕದಲ್ಲಿ ಕೆಲಸ ಖಾಲಿ ಇದೆ; ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿರುವ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, ಹೆಲಿಕಾಪ್ಟರ್ ವಿಭಾಗವು ಘಟಕದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯು ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಸಲ್ಲಿಸಬೇಕಿದೆ.
ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು (ಬಿಇ/ ಬಿಟೆಕ್ ಹೊರತುಪಡಿಸಿ) ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ದೂರವಾಣಿ ಸಂಖ್ಯೆ ಮತ್ತು ಇ-ಮೇಲ್ ಐಡಿಗಳ ತಿದ್ದುಪಡಿ ಮಾಡಲು ಸಹ ಅವಕಾಶ ಕಲ್ಪಿಸಲಾಗಿದೆ.
ಹೆಸರು ನೋಂದಣಿ ಮಾಡಿರುವ ಐಟಿಐ ಮಾಡಿರುವಂತಹ ಅಭ್ಯರ್ಥಿಗಳು ಎನ್‌ಎಸಿ/ ಎನ್‌ಸಿವಿಟಿ/ ಏಟಿಎಸ್‌ನ ಪ್ರಮಾಣ ಪತ್ರವನ್ನು ತಮ್ಮ ನೋಂದಾಯಿತ ಎಂಪ್ಲಾಯ್‌ಮೆಂಟ್ ಕಾರ್ಡ್‌ಗೆ ಸೇರಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಅಭ್ಯರ್ಥಿಗಳು ಈ ಕೂಡಲೇ ಕಛೇರಿಯನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2248488 ಸಂಖ್ಯೆಗೆ ಕರೆ ಮಾಡಬಹುದಾಗಿದೆ.











Click it and Unblock the Notifications