• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿವಮೊಗ್ಗ ಸ್ಮಾರ್ಟ್‌ ಸಿಟಿ ಲಿಮಿಟೆಡ್‌ನಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಶಿವಮೊಗ್ಗ, ಮಾರ್ಚ್ 19: ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 9ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಜನರಲ್ ಮ್ಯಾನೇಜರ್ 1 ಮತ್ತು ಸೀನಿಯರ್ ಅರ್ಬನ್ ಪ್ಲಾನರ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗದಲ್ಲಿ ಕೆಲಸ ಮಾಡಬೇಕು.

ಕೋಲಾರ ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ ಕೋಲಾರ ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 64 ವರ್ಷವನ್ನು ಮೀರಿರಬಾರದು. ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.

ವಿವಿಧ ಹುದ್ದೆಗೆ ಅರ್ಜಿ ಕರೆದ ತುಮಕೂರು ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗೆ ಅರ್ಜಿ ಕರೆದ ತುಮಕೂರು ಜಿಲ್ಲಾ ಪಂಚಾಯಿತಿ

ಜನರಲ್ ಮ್ಯಾನೇಜರ್ ಹುದ್ದೆಗೆ 74,400 ರೂ. ಮತ್ತು ಸೀನಿಯರ್ ಅರ್ಬನ್ ಪ್ಲಾನರ್ ಹುದ್ದೆಗೆ 10,0000 ರೂ. ವೇತನ ನಿಗದಿ ಮಾಡಲಾಗಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿ. ವೆಬ್ ಸೈಟ್‌ನಲ್ಲಿ ಅರ್ಜಿಯನ್ನು ನೀಡಲಾಗಿದೆ.

ಬೆಂಗಳೂರು ಜಿ. ಪಂಚಾಯಿತಿ ನೇಮಕಾತಿ; ಮಾ.26 ಕೊನೆ ದಿನ ಬೆಂಗಳೂರು ಜಿ. ಪಂಚಾಯಿತಿ ನೇಮಕಾತಿ; ಮಾ.26 ಕೊನೆ ದಿನ

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಏಪ್ರಿಲ್ 9ರೊಳಗೆ sscl.recruitmentnotification@gmail.com ಇ-ಮೇಲ್ ಐಡಿಗೆ ಕಳಿಸಬೇಕು.

ಅಭ್ಯರ್ಥಿಗಳು ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Apply for general manager and urban planner post at Shimoga Smart City Limited. Candidates can apply till April 9, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X