ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು; ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 16; ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಗರಿಷ್ಟ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಆ ಹುದ್ದೆಗಳಿಗೆ ಹೊಸ ಅಭ್ಯರ್ಥಿಗಳ ಆಯ್ಕೆಗೆ ಸರ್ಕಾರದ ಪತ್ರ ಸಂ.ಲಾ ಎಲ್.ಎಡಿ/155/2021 ದಿ:31-08-2021 ರಂತೆ ಉದ್ದೇಶಿಸಲಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ

ಈ ಬಗ್ಗೆ ಅರ್ಜಿಗಳನ್ನು ಪಡೆದು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಮೈಸೂರಿನಲ್ಲಿ ಹುದ್ದೆಗೆ ನೇಮಕಾತಿ ಬಯಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಾವಳಿ 1977 ನಿಯಮ 26 ರಲ್ಲಿ ತಿಳಿಸಿರುವ ಅಗತ್ಯ ಸರತ್ತುಗಳನ್ನು ಪೂರೈಸಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೀದರ್; ವಿವಿಧ ಹುದ್ದೆಗಳ ನೇಮಕಾತಿ, ಅ.9ರ ತನಕ ಅರ್ಜಿ ಹಾಕಿ ಬೀದರ್; ವಿವಿಧ ಹುದ್ದೆಗಳ ನೇಮಕಾತಿ, ಅ.9ರ ತನಕ ಅರ್ಜಿ ಹಾಕಿ

Apply For Government Lawyer Post At Mysuru

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೇಕು. ಆಸಕ್ತರು ತಮ್ಮ ಹೆಸರು, ವಿಳಾಸ, ಜಾತಿ, ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿನ ಅನುಭವ ಇತ್ಯಾದಿ ವಿವರಗಳನ್ನು ನಮೂದಿಸಿದ ಸ್ವಯಂ ವಿವರಣೆಯ ಮಾಹಿತಿಯೊಂದಿಗೆ ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿ ರಾಜ್ಯ ಬಾರ್ ಕೌನ್ಸಿಲ್ ನೋಂದಣಿ ಮತ್ತು ವಕೀಲ ವೃತ್ತಿಯಲ್ಲಿ ಹೊಂದಿರುವ ಅನುಭವದ ಬಗ್ಗೆ ಸ್ಥಳೀಯ ವಕೀಲರ ಸಂಘದ ದೃಢೀಕರಣ ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 190 ಹುದ್ದೆಗಳು ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 190 ಹುದ್ದೆಗಳು

ಆಸಕ್ತರು ಅರ್ಜಿಯನ್ನು ಸೆಪ್ಟೆಂಬರ್ 30ರೊಳಗಾಗಿ ಕಛೇರಿ ವೇಳೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ; ಕೋವಿಡ್ ಪರಿಸ್ಥಿತಿಯಲ್ಲಿ ಆರೋಗ್ಯ ವಲಯದಲ್ಲಿ ಕಾರ್ಯನಿರ್ವಹಿಸಲು ಸಾಕಷ್ಟು ನುರಿತ ಆರೋಗ್ಯ ತಂತ್ರಜ್ಞರ ಅವಶ್ಯಕತೆ ಇರುತ್ತದೆ. ಅದರಂತೆ ಆರೋಗ್ಯ ವಲಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ತಂತ್ರಜ್ಞರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡುವುದು ಅವಶ್ಯಕವಾಗಿರುತ್ತದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ನಿರ್ದೇಶನದಂತೆ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಅಡಿಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಹಾಸನ ಇವರಿಂದ ಕೌಶಲ್ಯಾಧಾರಿತ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದು.

ಎಸ್. ಎಸ್. ಎಲ್. ಸಿ ಪಾಸಾದ ಯುವಕ-ಯುವತಿಯರಿಗೆ, ಜನರಲ್ ಡ್ಯೂಟಿ ಅಸಿಸ್ಟೆಂಟ್, ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸ್, ಹೋಂ ಹೆಲ್ತ್ ಏಡ್, ಮೆಡಿಕಲ್ ಇಕ್ವಿಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್. ಪಿ.ಯು.ಸಿ ಪಾಸಾದ ಯುವಕ-ಯುವತಿಯರಿಗೆ, ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್-ಬೇಸಿಕ್, ಫೆಲೋಬೋಟಮಿಸ್ಟ್ ಪಿ.ಯು.ಸಿ (ಸೈನ್ಸ್) ಪಾಸಾದವರು ತರಬೇತಿ ನೀಡಲಾಗುತ್ತದೆ.

ಈ ವೃತ್ತಿ ತರಬೇತಿ ಅಲ್ಪಾವಧಿಯದ್ದಾಗಿದ್ದು ತರಬೇತಿಯನ್ನು ಜಿಲ್ಲಾ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರ/ ಖಾಸಗಿ ಆಸ್ಪತ್ರೆಗಳಲ್ಲಿ ನೀಡಬಹುದಾಗಿರುತ್ತದೆ. ಹೆಸರು ನೋಂದಾಯಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷಗಳು.

ಆಸಕ್ತ, ಅರ್ಹ ಅಭ್ಯರ್ಥಿಗಳು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಸಿಬ್ಬಂದಿಗಳ ಮೊಬೈಲ್‍ಗಳಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ. 8861646939 ಅಥವಾ ಸಹಾಯಕ ನಿರ್ದೇಶಕರು 9844552919/ 9008509040.

ಆಕ್ಷೇಪಣೆಗಳಿದ್ದರೆ ಸಲ್ಲಿಸಿ; ಶಿಶು ಅಭಿವೃದ್ಧಿ ಯೋಜನೆ ತೀರ್ಥಹಳ್ಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಘಂಟೆಜನಗಲ್ (ಮಿನಿ), ಗುರುವಳ್ಳಿ (ಮಿನಿ) ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ ಬೇಗುವಳ್ಳಿ, ಬಾಂಡ್ಯ, ಮರಗಳಲೆ ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆ ಸ್ಥಾನಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತೀರ್ಥಹಳ್ಳಿ ಕಚೇರಿಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಆಯ್ಕೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 21/09/2021ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸೊಪ್ಪುಗುಡ್ಡೆ, ತೀರ್ಥಹಳ್ಳಿ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
Applications invited to the government lawyer post at Mysuru district. Candidates can apply till September 30, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X