• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿಂಚೋಳಿ: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

|

ಕಲಬುರಗಿ, ಮಾರ್ಚ್ 22: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಏಪ್ರಿಲ್ 5ರ ಸಂಜೆ 4 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಏಳು ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಾಗಿರಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಜಿ. ಪಂಚಾಯಿತಿ ನೇಮಕಾತಿ; ಮಾ.26 ಕೊನೆ ದಿನ

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಪೂರ್ಣ ಹೆಸರು, ಜನ್ಮ ದಿನಾಂಕ, ವಿದ್ಯಾರ್ಹತೆ, ಸದ್ಯದ ಅಂಚೆ ವಿಳಾಸ, ಜಿಲ್ಲಾ ಬಾರ್ ಅಸೋಸಿಯೇಷನ್ ನೋಂದಣಿ ವಿವರ, ಕರ್ನಾಟಕ ಬಾರ್ ಅಸೋಸಿಯೇಶನ್ ನೋಂದಣಿ ವಿವರ ಮುಂತಾದ ದಾಖಲೆಗಳನ್ನು ಸಲ್ಲಿಸಬೇಕು.

ಕೊಪ್ಪಳ; 16 ಬಿಎಫ್‌ಟಿ ಹುದ್ದೆ ನೇಮಕಾತಿ, 12 ಸಾವಿರ ವೇತನ

ದಿವಾಣಿ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಕ್ರಿಮಿನಲ್ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಜಾತಿ ಮತ್ತು ಮತ್ತಿತರ ಪ್ರಮಾಣಪತಗಳನ್ನು (ಸಂಬಂಧಪಟ್ಟ ತಹಶೀಲ್ದಾರರ ಕಾರ್ಯಾಲಯದಿಂದ ಪಡೆದ) ದಾಖಲೆಗಳು ಹಾಗೂ ವೈಯಕ್ತಿಕ ವಿವರನ್ನೊಳಗೊಂಡ ಅರ್ಜಿಯನ್ನು ಸಲ್ಲಿಸಬೇಕು.

ವಿವಿಧ ಹುದ್ದೆಗೆ ಅರ್ಜಿ ಕರೆದ ತುಮಕೂರು ಜಿಲ್ಲಾ ಪಂಚಾಯಿತಿ

ಆಸಕ್ತರು ಅರ್ಜಿಗಳನ್ನು 2021ರ ಏಪ್ರಿಲ್ 5 ರ ಸಂಜೆ 4 ಗಂಟೆಯೊಳಗಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

English summary
Applications invited from candidates for the post of governmenr lawyer post in Kalaburagi district Chincholi. Candidates can apply till April 5, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X