• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

|
Google Oneindia Kannada News

ಧಾರವಾಡ, ಮಾರ್ಚ್ 06: ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲ, ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಅರ್ಹರು ಮಾರ್ಚ್ 15ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕಾನೂನು ಇಲಾಖೆ ನಿರ್ದೇಶನದ ಮೇರೆಗೆ ಅಪರ ಸರಕಾರಿ ವಕೀಲರ ಹುದ್ದೆಗೆ ಹೊಸದಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬಾರ್ ಅಸೊಸಿಯೇಷನ್‌ನ ಅರ್ಹರು ಅರ್ಜಿಗಳನ್ನು ಹಾಕಬಹುದು.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಬಾರ್ ಅಸೋಸಿಯೇಷನ್ ಸದಸ್ಯರಾಗಿರಬೇಕು ಹಾಗೂ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 10 ವರ್ಷ ಮತ್ತು ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 7 ವರ್ಷ ವಕೀಲ ವೃತ್ತಿಯ ಅನುಭವ ಹೊಂದಿರಬೇಕು.

ತುಮಕೂರು ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ ತುಮಕೂರು ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ

ಈ ನೇಮಕಾತಿಯು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಸೇವಾ ಷರತ್ತುಗಳ ನಿಯಮಗಳು 1977ರಲ್ಲಿ ಹೇಳಲಾದ ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಹೆಚ್‌ಪಿಸಿಎಲ್ ನೇಮಕಾತಿ; ಏ.15ರೊಳಗೆ ಅರ್ಜಿ ಹಾಕಿ ಹೆಚ್‌ಪಿಸಿಎಲ್ ನೇಮಕಾತಿ; ಏ.15ರೊಳಗೆ ಅರ್ಜಿ ಹಾಕಿ

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲಾತಿಗಳೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾರ್ಚ್ 15, 2021 ರೊಳಗಾಗಿ ಸಲ್ಲಿಸಬೇಕು.

English summary
Apply for government lawyer post in Dharwad and Hubballi court. Candidates can submit applications till March 15, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X