ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ
ಮಡಿಕೇರಿ, ಜೂ. 12 : ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿನ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಲಸು ಕೊನೆಯ ದಿನಾಂಕ ಜುಲೈ 4, 2015.
ಖಾಲಿ ಇರುವ ಹುದ್ದೆಗಳಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಗಳಲ್ಲಿ ಸಲ್ಲಿಸಬಹುದಾಗಿದೆ. ಖಾಲಿ ಇರುವ ಸ್ಥಾನಗಳಿಗೆ ಮಾಸಿಕ 5,500 ರೂ. ಗೌರವ ಸಂಭಾವನೆ ನಿಗದಿಪಡಿಸಿದ್ದು, ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. [ಜೂನ್ 14ರಂದು ಕೊಡಗಿನಲ್ಲಿ ಉದ್ಯೋಗ ಮೇಳ]

ಹುದ್ದೆ, ಮೀಸಲಾತಿ ವಿವರ : ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾ.ಪಂ. ಗ್ರಂಥಾಲಯ (3 ಬಿ-ಗ್ರಾಮೀಣ ಅಭ್ಯರ್ಥಿ), ಮಡಿಕೇರಿಯ ಮೂರ್ನಾಡು ಗ್ರಾಮ ಪಂಚಾಯಿತಿ (ಸಾಮಾನ್ಯ ಅಭ್ಯರ್ಥಿ-ಮಹಿಳೆ), ಸೋಮವಾರಪೇಟೆಯ ಚೌಡ್ಲು (ಪರಿಶಿಷ್ಟ ಜಾತಿ-ಮಹಿಳೆ), ವಿರಾಜಪೇಟೆಯ ಚೆನ್ನಯ್ಯನ ಕೋಟೆ (ಸಾಮಾನ್ಯ ಅಭ್ಯರ್ಥಿ- ಗ್ರಾಮೀಣ ಅಭ್ಯರ್ಥಿ).[ಇಂಧನ ಇಲಾಖೆಯಲ್ಲಿ 8 ಸಾವಿರ ಹುದ್ದೆ ಭರ್ತಿ, ವಿವರಗಳು]
ಅರ್ಜಿಯೊಂದಿಗೆ ವಿದ್ಯಾರ್ಹತೆಯ ಹಾಗೂ ಇತರೆ ದಾಖಲೆಗಳನ್ನು ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಖ್ಯ ಗ್ರಂಥಾಲಯಾಧಿಕಾರಿಯವರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಅವರನ್ನು 08272-225463 ದೂರವಾಣಿ ಸಂಖ್ಯೆ ಮೂಲಕ ಸಂಪರ್ಕಿಸಬಹುದು.
ಹುದ್ದೆಯ ಕುರಿತ ವಿವರಗಳಿಗಾಗಿ ಸದರಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications