ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌ನಲ್ಲಿ ಕೆಲಸ ಖಾಲಿ ಇದೆ; ಸೆ. 30ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬೀದರ್, ಸೆಪ್ಟೆಂಬರ್ 12; ಬೀದರ್ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

ಉದ್ಯೋಗ ಖಾತರಿ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 20 ಸಾವಿರ ಮಾನವದಿಗಳಿಗಿಂತ ಹೆಚ್ಚಿನ ಮಾನವ ದಿನ ಸೃಜನೆ ಮಾಡಿದ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ

ಬೀದರ್ ತಾಲ್ಲೂಕಿನ ಬರೂರ, ಸಿಂದೋಲ, ಕಾಡವಾದ ಹಾಗೂ ಔರಾದ(ಬಿ) ತಾಲ್ಲೂಕಿನ ಚಿಂತಿ, ಸುಂದಾಳ, ಜೋಜನಾ ಹಾಗೂ ಹುಲಸೂರ ತಾಲ್ಲೂಕಿನ ಬೇಲೂರ ಹಾಗೂ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

 Apply For Grama Kayaka Mitra Post At Bidar District

ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು 1/1/2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ ಹೊಂದಿರಬೇಕು.

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ

ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ (2018-19, 2019-20 ಹಾಗೂ 2020-21) ಕನಿಷ್ಠ ಎರಡು ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸರಬೇಕು. ಅಭ್ಯರ್ಥಿಗಳ ವಯೋಮಿತಿ 1/1/2021ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಬಾರದು.

ಅಭ್ಯರ್ಥಿ ಓದು, ಬರಹ ಚೆನ್ನಾಗಿ ತಿಳಿದಿರಬೇಕು. ಸದರಿ ಹುದ್ದೆಗೆ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಯು ಪರಿಣಾಮಕಾರಿ ಸಂವಹ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಗ್ರಾಮ ಪಂಚಾಯತಿಗೆ 30/9/2021ರ ಸಂಜೆ 5.30ಗಂಟೆಯೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರಾ.ಉ) ತಾಲ್ಲೂಕ ಪಂಚಾಯತ ಔರಾದ (ಬಿ) ಭೇಟಿ ಮಾಡಬಹುದು. ಮೊಬೈಲ್ ಸಂಖ್ಯೆ 9845846445, 9900272780, 9663949166.

ಶಿವಮೊಗ್ಗದಲ್ಲಿ ಉದ್ಯೋಗ ಮೇಳ; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸೆಪ್ಟೆಂಬರ್ 14ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಸುಮಾರು 5ಕ್ಕೂ ಹೆಚ್ಚು ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಪ್ರವೇಶ ಉಚಿತವಾಗಿದೆ.

ಎಸ್‍. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾದ 18 ರಿಂದ 35 ವಯೋಮಾನದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-255294, 9535312531, 9482023412.

ಕರ್ನಾಟಕ ಪೊಲೀಸ್ ನೇಮಕಾತಿ; ಕರ್ನಾಟಕ ಪೊಲೀಸ್ ಇಲಾಖೆ ಪ್ರಂಶಸನೀಯ ಕ್ರೀಡಾಪಟುಗಳಿಂದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಕೆ ಮಾಡಲು 29/9/2021ರ ಸಂಜೆ 6 ಗಂಟೆಯ ಕೊನೆಯ ದಿನವಾಗಿದೆ.

English summary
Application invited to fill Grama Kayaka Mitra post under the Mahatma Gandhi National Rural Employment Guarantee Scheme at Bidar district. Candidates can apply till September 30, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X