ಧಾರವಾಡ; 29 ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಖಾಲಿ ಇದೆ

ಧಾರವಾಡ, ಜೂನ್ 14; ಧಾರವಾಡದಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ, ಅರ್ಹರು ಜೂನ್ 29ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜಿಲ್ಲಾ ಪಂಚಾಯತಿ ಪ್ರಧಾನ ಕಛೇರಿಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2021-22ನೇ ಸಾಲಿನಲ್ಲಿ 20 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ.

Apply For Grama Kayaka Mitra Post At Dharwad District

ಧಾರವಾಡ ಜಿಲ್ಲೆಯ 29 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 13 ರಿಂದ ಜೂನ್ 29ರ ತನಕ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿ ಕಾರ್ಯಾಲಯ ಧಾರವಾಡ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 0836-2447542.

ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ; ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗಾಗಿ ಧಾರವಾಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ನೀಡಲು ಅರ್ಜಿ ಕರೆಯಲಾಗಿದೆ.

ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ. 2.50 ಲಕ್ಷ ಮಿತಿ ಹೊಂದಿರಬೇಕು, 40 ವರ್ಷ ವಯೋಮಾನದೊಳಗಿರುವ ಮತ್ತು ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿಗಳನ್ನು www.sw.kar.nic.in ವೆಬ್‍ಸೈಟ್ ಮೂಲಕ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000ಗಳ ಶಿಷ್ಯವೇತನವನ್ನು 2 ವರ್ಷಗಳ ಕಾಲ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜುಲೈ 15 ಕೂನೆಯ ದಿನವಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447201 ಹಾಗೂ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ್, ಧಾರವಾಡ ಇವರ ಕಛೇರಿ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+