• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊಪ್ಪಳ; ಕೆಲಸ ಖಾಲಿ ಇದೆ, ಡಿಸೆಂಬರ್ 6ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕೊಪ್ಪಳ, ನವೆಂಬರ್ 25; ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳ ಆಯ್ದ 122 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿತ್ತು. ನವೆಂಬರ್ 15 ರಂದು ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ 6 ತಾಲ್ಲೂಕುಗಳ ಒಟ್ಟು 15 ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಅರ್ಜಿಗಳು ಸ್ವೀಕೃತವಾಗಿಲ್ಲ.

ಈ ಹಿನ್ನಲೆಯಲ್ಲಿ ಖಾಲಿ ಉಳಿದ ಹುದ್ದೆಗಳ ಭರ್ತಿಗೆ ಮರು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 6ರ ಮಧ್ಯಾಹ್ನ 1.30ರ ತನಕ ಅವಕಾಶ ನೀಡಲಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ

ಕೊಪ್ಪಳ ತಾಲ್ಲೂಕಿನ ಬೆಟಗೇರಿ, ಬಿಸರಹಳ್ಳಿ, ಕಲಕೇರಿ, ಕೋಳೂರು, ಕುಷ್ಟಗಿ ತಾಲ್ಲೂಕಿನ ತುಗ್ಗಲದೋಣಿ, ಕನಕಗಿರಿ ತಾಲ್ಲೂಕಿನ ನವಲಿ, ಯಲಬುರ್ಗಾ ತಾಲ್ಲೂಕಿನ ಮುರಡಿ, ಮಾಟಲದಿನ್ನಿ, ವಣಗೇರಿ, ಹಿರೇಅರಳಿಹಳ್ಳಿ, ಚಿಕ್ಕಮ್ಯಾಗೇರಿ, ಕುಕನೂರು ತಾಲ್ಲೂಕಿನ ಮಂಗಳೂರು, ಶಿರೂರು ಹಾಗೂ ಗಂಗಾವತಿ ತಾಲ್ಲೂಕಿನ ಆನೆಗುಂದಿ ಮತ್ತು ಮಲ್ಲಾಪುರ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 6000 ರೂ. ಗಳನ್ನು ನೀಡಲಾಗುತ್ತದೆ. ಕಾರ್ಯನಿರ್ವಹಣೆ ಆಧರಿಸಿ 5000 ರೂ. ಗಳ ಪ್ರೋತ್ಸಾಹಧನವನ್ನು ಸಹ ನೀಡಲಾಗುವುದು. ನಿಗದಿತ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಅರ್ಜಿಗಳನ್ನು ಸಲ್ಲಿಸುವ ಮಹಿಳೆಯರು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ಕನಿಷ್ಟ 10ನೇ ತರಗತಿ ಉತ್ತೀರ್ಣರಾಗಿರಬೇಕು. ದಿನಾಂಕ 1/1/2021ಕ್ಕೆ ಅನ್ವಯಿಸುವಂತೆ ಅಭ್ಯರ್ಥಿ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ್ ಹೊಂದಿರಬೇಕು.

ಕಳೆದ 3 ವರ್ಷಗಳಲ್ಲಿ (2018-19, 2019-20 ಮತ್ತು 2020-21) ಕನಿಷ್ಟ 2 ವರ್ಷ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿ ವಯೋಮಿತಿಯು ದಿನಾಂಕ 1//1/2021ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು.

ಅಭ್ಯರ್ಥಿ ಓದು ಬರಹ ತಿಳಿದಿರಬೇಕು. ಪರಿಣಾಮಕಾರಿ ಸಂವಹನ ಕೌಶಲ್ಯ ಹೊಂದಿರಬೇಕು. ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೋಮದಿಗೆ ಸ್ಪಂದಿಸುವ ಗುಣ ಲಕ್ಷಣ ಹೊಂದಿರಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಪಂಚಾಯತಿ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.

ಅರ್ಜಿ ಆಹ್ವಾನ; ಕಂದಾಯ ಇಲಾಖೆಗೆ ಸಂಬಂಧಿಸಿದ ವ್ಯಾಜ್ಯದಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಹೆಚ್ಚುವರಿ ಜಿಲ್ಲಾ ನ್ಯಾಯಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್‍ಎಲ್‍ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ತಹಶೀಲ್ದಾರ್/ ನಿವೃತ್ತ ಉಪ ತಹಶೀಲ್ದಾರನ್ನು ನೇಮಕ ಮಾಡಿಕೊಳ್ಳಲು ಕೊಡಗು ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಸರ್ಕಾರದ ನಿಯಮಾವಳಿಗಳಂತೆ ಸಂಚಿತ ವೇತನ ಪಾವತಿಸಲಾಗುವುದು. ಆಸಕ್ತಿಯುಳ್ಳವರು ತಮ್ಮ ಸ್ವವಿವರಗಳನ್ನೊಳಗೊಂಡ ಪೂರ್ಣ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಡಿಸೆಂಬರ್ 22ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ವಿವರಗಳಿಗೆ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕೆ ಅರ್ಜಿ; 2021-22ನೇ ಸಾಲಿನ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಕರೆಯಲಾಗಿದೆ.

ಸಫಾಯಿ ಕರ್ಮಚಾರಿ/ ಪೌರಕಾರ್ಮಿಕರು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ನೋಂದಾಯಿತ ಸಂಘ ಸಂಸ್ಥೆಗಳಿಗೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ಶೇ.75 ರಷ್ಟು ಸಹಾಯಧನ ನೀಡುವ ಯೋಜನೆ ಇದಾಗಿದೆ.

ಸಫಾಯಿ ಕರ್ಮಚಾರಿ, ಪೌರಕಾರ್ಮಿಕರು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಮಕ್ಕಳಿಗೆ ಆನ್‍ಲೈನ್ ಪಾಠ ಕೇಳಲು ಹಾಗೂ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್ ವಿತರಣಾ ಯೋಜನೆ. ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್ ksskdc03 @mail.com ಮೂಲಕ ಅಪ್‍ಲೋಡ್ ಮಾಡಿ ಅರ್ಜಿ ಸಲ್ಲಿಸಲು ಡಿಸೆಂಬರ್ 15ರ ತನಕ ಅವಕಾಶ ನೀಡಲಾಗಿದೆ.

   ಸ್ವೀಡನ್ ಮೊದಲ ಮಹಿಳಾ ಪ್ರಧಾನಿ ಆದ ಕೆಲವೇ ಗಂಟೆಗಳಲ್ಲಿ ಆಂಡರ್ಸನ್ ರಾಜಿನಾಮೆ | Oneindia Kannada

   ಆಸಕ್ತರು ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಮಡಿಕೇರಿ ಕೊಡಗು ಜಿಲ್ಲೆ 571201 ಇವರನ್ನು ಸಂಪರ್ಕಿಸಬಹುದಾಗಿದೆ.

   English summary
   Apply for Grama Kayaka Mitra post at Koppal district. Candidates can submit applications till December 6, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X