ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ, ಡಿಸೆಂಬರ್ 8ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕೊಪ್ಪಳ, ನವೆಂಬರ್ 28; ಕೊಪ್ಪಳ ಜಿಲ್ಲಾ ಪಂಚಾಯತಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 8ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳ ಆಯ್ದ 122 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೇಮಕಾತಿ; ಸ್ಪಷ್ಟನೆಗಳು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೇಮಕಾತಿ; ಸ್ಪಷ್ಟನೆಗಳು

ಆದರೂ ಸಹ ಕೆಲವು ತಾಲೂಕುಗಳ ಗ್ರಾಮ ಪಂಚಾಯತಿಗಳಿಗೆ ಅರ್ಹ ಅರ್ಜಿಗಳು ಸ್ವೀಕೃತವಾಗಿರುವುದಿಲ್ಲ. ಈ ಕುರಿತು ಮರು ಅಧಿಸೂಚನೆಯನ್ನು ಹೊರಡಿಸಲು ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಎಸ್‌ಬಿಐ ನೇಮಕಾತಿ; 65 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; 65 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

Apply For Grama Kayaka Mitra Post At Koppal Before December 8

ಯಾವ-ಯಾವ ಪಂಚಾಯಿತಿಗಳು; ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ, ಗಂಗಾವತಿ ತಾಲ್ಲೂಕಿನ ಆನೆಗುಂದಿ, ಕುಷ್ಟಗಿ ತಾಲ್ಲೂಕಿನ ಚಳಗೇರಿ, ಕುಕನೂರು ತಾಲ್ಲೂಕಿನ ಮಂಗಳೂರು ಹಾಗೂ ಶಿರೂರು, ಯಲಬುರ್ಗಾ ತಾಲ್ಲೂಕಿನ ಚಿಕ್ಕಮ್ಯಾಗೇರಿ, ಮಾಟಲದಿನ್ನಿ, ಮುರಡಿ, ವಣಗೇರಿ ಹಾಗೂ ಮುಧೋಳ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ನವೆಂಬರ್ 28ರಂದು ಅಧಿಸೂಚನೆ ಪ್ರಕಟವಾಗಲಿದೆ.

KPSC ಕಚೇರಿಯಲ್ಲಿ 34 ಹುದ್ದೆ ಭರ್ತಿ, ಅರ್ಜಿ ಹಾಕಲು ಸಿದ್ಧರಾಗಿ KPSC ಕಚೇರಿಯಲ್ಲಿ 34 ಹುದ್ದೆ ಭರ್ತಿ, ಅರ್ಜಿ ಹಾಕಲು ಸಿದ್ಧರಾಗಿ

ಅರ್ಜಿ ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 6000 ಗೌರವ ಧನ (ಕಾರ್ಯನಿರ್ವಹಣೆ ಆಧರಿಸಿ ರೂ. 5000 ಗಳ ಪ್ರೋತ್ಸಾಹ ಧನ) ನಿಗದಿಪಡಿಸಲಾಗಿದೆ.

ಅರ್ಹತಗಳು; ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಹತೆ ಕನಿಷ್ಠ 10 ನೇ ತರಗತಿ ಉತ್ತಿರ್ಣರಾಗಿರಬೇಕು. ಅಭ್ಯರ್ಥಿಯು ದಿನಾಂಕ 01/01/2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ ಹೊಂದಿರಬೇಕು.

ಅಭ್ಯರ್ಥಿಯು ಕಳೆದ 5 ವರ್ಷಗಳಲ್ಲಿ (2018-19, 2019-20, 2020-21, 2021-22 ಮತ್ತು 2022-23) . ಕನಿಷ್ಠ 2 ವರ್ಷ ಈ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ವಯೋಮಿತಿ ದಿನಾಂಕ 01/01/2021ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು.

ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು. ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಯ ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣ ಹೊಂದಿರಬೇಕು.

ಗ್ರಾಮ ರೋಜ್‌ಗಾರ್ ಮಿತ್ರರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್‌ಗಾರ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

ವಿಶೇಷ ಸೂಚನೆ: ಗ್ರಾಮ ಕಾಯಕ ಮಿತ್ರ ಹುದ್ದೆಗೆ ಡಿಸೆಂಬರ್ 8ರ ಮಧ್ಯಾಹ್ನ 1.30 ಗಂಟೆಯೊಳಗೆ ಸಂಬಂಧಿಸಿದ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನಿಗದಿತ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಆಯ್ಕೆ ವಿಧಾನ, ಕರ್ತವ್ಯಗಳು ಮತ್ತು ಇನ್ನಿತರ ವಿವರಗಳಿಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

English summary
Apply for grama kayaka mitra post at Koppal district of Karnataka. Post will fill up at 7 taluks. Candidates can apply till December 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X