ಬೆಂಗಳೂರು ಗ್ರಾಂ. ಜಿಲ್ಲೆ; ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 5; ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 25 'ಗ್ರಾಮ ಕಾಯಕ ಮಿತ್ರ' ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

'ಗ್ರಾಮ ಕಾಯಕ ಮಿತ್ರ' ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 10ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ತಾಲೂಕು ಪಂಚಾಯಿತಿ/ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬಹುದು.

ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು 'ಗ್ರಾಮ ಕಾಯಕ ಮಿತ್ರ'ರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯತಿಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

Apply For Grama Kayaka Mitra Post In Bengaluru Rural

ಅಭ್ಯರ್ಥಿಯು 2021ರ ಜನವರಿ 1ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ್ ಹೊಂದಿರಬೇಕು. ಕನಿಷ್ಟ 10ನೇ ತರಗತಿ ಉತ್ತಿರ್ಣರಾಗಿರಬೇಕು ಹಾಗೂ 2021ರ ಜನವರಿ 1ಕ್ಕೆ ಅನ್ವಯಿಸುವಂತೆ 45 ವರ್ಷ ವಯೋಮಿತಿ ಮೀರಿರಬಾರದು.

ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ (2018-19, 2019-20 ಮತ್ತು 2020-21 ) ಕನಿಷ್ಟ 2 ವರ್ಷ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ಓದು, ಬರಹ ಚೆನ್ನಾಗಿ ತಿಳಿದಿರಬೇಕು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+