• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಏ.15ರ ತನಕ ಅರ್ಜಿ ಹಾಕಿ

|
Google Oneindia Kannada News

ಕೊಪ್ಪಳ, ಏಪ್ರಿಲ್ 2; ಕೊಪ್ಪಳ ಜಿಲ್ಲೆಯ 7 ತಾಲೂಕಗಳ ಆಯ್ದ 122 ಗ್ರಾಮ ಪಂಚಾಯತಿಗಳಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 15ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು 'ಗ್ರಾಮ ಕಾಯಕ ಮಿತ್ರ'ರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯತಿಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಕಲಬುರಗಿ; ಕೆಲಸ ಖಾಲಿ ಇದೆ, ಏ. 12ರೊಳಗೆ ಅರ್ಜಿ ಹಾಕಿ ಕಲಬುರಗಿ; ಕೆಲಸ ಖಾಲಿ ಇದೆ, ಏ. 12ರೊಳಗೆ ಅರ್ಜಿ ಹಾಕಿ

122 ಗ್ರಾಮ ಪಂಚಾಯತಿಗಳ ವಿವವರಗಳನ್ನು ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕ ಪಂಚಾಯತಿ ಅವರಿಂದ ಪಡೆಯಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6 ಸಾವಿರ ರೂ. ಗಳನ್ನು ನಿಗದಿತ ಗೌರವ ಧನವಾಗಿ ಹಾಗೂ ಕಾರ್ಯನಿರ್ವಹಣೆ ಆಧರಿಸಿ ರೂ. 5000ಗಳನ್ನು ಪ್ರೋತ್ಸಾಹ ಧನವನ್ನಾಗಿ ನೀಡಲಾಗುವುದು.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ಅಭ್ಯರ್ಥಿಯು 2021ರ ಜನವರಿ 1ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ್ ಹೊಂದಿರಬೇಕು. ಕನಿಷ್ಟ 10ನೇ ತರಗತಿ ಉತ್ತಿರ್ಣರಾಗಿರುವ ಹಾಗೂ 2021ರ ಜನವರಿ 1ಕ್ಕೆ ಅನ್ವಯಿಸುವಂತೆ 45 ವರ್ಷ ವಯೋಮಿತಿ ಮೀರಿರದ, ಕನ್ನಡ ಓದಲು ಮತ್ತು ಬರೆಯಲು ಬರುವ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ.12ರೊಳಗೆ ಅರ್ಜಿ ಹಾಕಿ ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ.12ರೊಳಗೆ ಅರ್ಜಿ ಹಾಕಿ

ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ (2018-19, 2019-20 ಮತ್ತು 2020-21 ) ಕನಿಷ್ಟ 2 ವರ್ಷ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ಪರಿಣಾಮಕಾರಿ ಸಂವಹನ ಕೌಶಲ್ಯ , ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣ ಹೊಂದಿರಬೇಕು. ಗ್ರಾಮ ರೋಜ್‌ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

ಆಸಕ್ತರು ಅರ್ಜಿಯನ್ನು ಏಪ್ರಿಲ್ 15ರ ಸಂಜೆ 5.30ರೊಳಗೆ ಆಯಾ ಗ್ರಾಮ ಪಂಚಾಯತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ, ಸಹಾಯಕ ನಿರ್ದೇಶಕರು (ಗ್ರಾ.ಉ) ತಾಲೂಕ ಪಂಚಾಯತಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9740584237.

English summary
Apply for grama kayaka mitra post in Koppal district under under MGNREGA. Women candidates can submit applications till April 15, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X