ಹಾವೇರಿಯಲ್ಲಿ ಕೆಲಸ ಖಾಲಿ ಇದೆ; ಜೂ. 15ರ ತನಕ ಅರ್ಜಿ ಹಾಕಿ
ಹಾವೇರಿ, ಮೇ 31; ಹಾವೇರಿ ಜಿಲ್ಲೆಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 15ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯಲ್ಲಿ ಕೆಲಸ ಮಾಡಬೇಕಿದೆ.
ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡುವವರು 10ನೇ ತರಗತಿ ಉತ್ತೀರ್ಣಗೊಂಡಿರಬೇಕು. ಹಾವೇರಿ ಜಿಲ್ಲಾ ಪಂಚಾಯಿತಿ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಭ್ಯರ್ಥಿಗಳು ಸಲ್ಲಿಕೆ ಮಾಡಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸರಿಯಾದ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿಯನ್ನು ನಮೂದು ಮಾಡಬೇಕು ಎಂದು ತಿಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ haveri.nic.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-249033.












Click it and Unblock the Notifications