ಬೆಂಗಳೂರು ವಿವಿ; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 31: ಬೆಂಗಳೂರು ವಿಶ್ವವಿದ್ಯಾಲಯ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 5/9/2020ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
Recommended Video
ಬೆಂಗಳೂರು ವಿವಿಯ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ವಿಶ್ವವಿದ್ಯಾಲ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನ ಅಧ್ಯಯನ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಯುಜಿಸಿ/ಎಐಸಿಟಿಇ ಮಾನದಂಡಗಳನ್ನು ಪೂರೈಸಿದ್ದು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಣೆ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿಗಳನ್ನು ಮತ್ತು ಅಂಕಪಟ್ಟಿ ಮತ್ತು ಇತರ ಪೂರಕ ದಾಖಲೆಗಳನ್ನು ಸಂಬಂಧಪಟ್ಟ ವಿಭಾಗ ಮುಖ್ಯಸ್ಥರಿಗೆ 5/9/2020ರ ಒಳಗಾಗಿ ಸಲ್ಲಿಸಲು ತಿಳಿಸಲಾಗಿದೆ.
ಅತಿಥಿ ಉಪನ್ಯಾಸಕರ ಅವಶ್ಯಕತೆ ಇರುವ ವಿಭಾಗಗಳ ಪಟ್ಟಿಯನ್ನು ವಿಶ್ವವಿದ್ಯಾಲಯದ ಅಂತರ್‌ಜಾಲದಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರುಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಸಂದರ್ಶನದ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್ ಸೈಟ್‌ನಲ್ಲಿ ನೇಮಕಾತಿ ವಿಭಾಗದಲ್ಲಿ ಕ್ಲಿಕ್ ಮಾಡಿ












Click it and Unblock the Notifications