ಬಳ್ಳಾರಿ: ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ, ವಿವರ

ಬಳ್ಳಾರಿ, ಜುಲೈ 27: ಬಳ್ಳಾರಿಯಲ್ಲಿ ಅತಿಥಿ ಶಿಕ್ಷಕ, ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಕರು ಮತ್ತು ಉಪನ್ಯಾಸಕರು ಜುಲೈ 30ರೊಳಗೆ ಅರ್ಜಿ ಸಲ್ಲಿಸಬಹುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿಯ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.

Apply For Guest Lecturer And Teacher Recruitment At Ballari

ಅರ್ಹ ಅಭ್ಯರ್ಥಿಗಳು ವಸತಿ ಶಾಲೆಗೆ ಬೇಕಾಗಿರುವ ಬಿ.ಎಸ್, ಬಿ.ಎಡ್ ಮತ್ತು ಕಾಲೇಜಿಗೆ ಎಂ.ಎ. ಬಿ.ಎಡ್, ಎಂ.ಎಸ್‌ಸಿ ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಕಂಪ್ಲಿಯ 6ನೇ ವಾರ್ಡ್ ವಿನಾಯಕ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿಯ ಬೆಳಗಲ್ಲು ರಸ್ತೆಯ ಆಕಾಶವಾಣಿ ಹತ್ತಿರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಕಚೇರಿ ಸಂಪರ್ಕಿಸಬಹುದು.

ಶಾಲೆ ಮತ್ತು ಕಾಲೇಜಿನ ಹೆಸರು ಹಾಗೂ ಖಾಲಿ ಇರುವ ಅಥಿತಿ ಶಿಕ್ಷಕ, ಅತಿಥಿ ಉಪನ್ಯಾಸಕರ ಹುದ್ದೆಗಳ ವಿವರಗಳನ್ನು ನೀಡಲಾಗಿದೆ. ಕಂಪ್ಲಿಯ 6ನೇ ವಾರ್ಡ್‌ ವಿನಾಯಕ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಣಿತ ವಿಷಯಕ್ಕೆ ಅತಿಥಿ ಶಿಕ್ಷಕರು ಬೇಕಾಗಿದ್ದು, ಪ್ರಾಂಶುಪಾಲರ ಮೊಬೈಲ್ ಸಂಖ್ಯೆ 9480933730.

ಬಳ್ಳಾರಿಯ ಬೆಳಗಲ್ಲು ರಸ್ತೆಯ ಆಕಾಶವಾಣಿ ಹತ್ತಿರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಜೀವಶಾಸ್ತ್ರ, ಕನ್ನಡ, ಆಂಗ್ಲ ಮತ್ತು ಉರ್ದು ವಿಷಯಗಳಿಗೆ ಅತಿಥಿ ಉಪನ್ಯಾಸಕರು ಬೇಕಾಗಿದ್ದು, ಪ್ರಾಂಶುಪಾಲರ ಮೊಬೈಲ್ ಸಂಖ್ಯೆ 8861623814 ಕರೆ ಮಾಡಿ ಮಾಹಿತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಜುಲೈ 30ರಂದು ಉದ್ಯೋಗ ಮೇಳ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 30ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಮೈಸೂರು, ಹಿಮಂತ್ಸಾ ಸಿಂಗ್ ಕಾಲಿನೆನ್ ಹಾಸನ, ತಾಜ್ ರೆಸಾರ್ಟ್‌ ಮಡಿಕೇರಿ, ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಪೆಂಟೆಟೆಕ್ ಮಡಿಕೇರಿ, ಎಸ್ಎಲ್ಎನ್ ಕಾಫಿ ವಕರ್ಸ್‌ ಕೂಡಿಗೆ, ಮುತ್ತೂಟ್ ಪೈನಾನ್ಸ್ ಮೈಸೂರು ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿಗಿಂತ ಕಡಿಮೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು.

ಆಸಕ್ತ, ಅರ್ಹ ಅಭ್ಯರ್ಥಿಗಳು ಸ್ವವಿವರದ ಪ್ರತಿಯ ಜೊತೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8296020826.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+