ಧಾರವಾಡ; ವಸತಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ ಹುದ್ದೆ ಖಾಲಿ
ಬೆಂಗಳೂರು, ಏಪ್ರಿಲ್ 02; ಅಲ್ಪ ಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಆರು ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಏಪ್ರಿಲ್ 15ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿರುವ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಕಾಲೇಜಿನ ಸಿ.ಬಿ.ಎಸ್.ಇ ವಿಜ್ಞಾನ ವಿಭಾಗಕ್ಕೆ ಬೋಧಿಸಲು 2023-24ನೇ ಸಾಲಿಗಾಗಿ ಅತಿಥಿ ಉಪನ್ಯಾಸಕರ 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಹಾಗೂ ಸೂಕ್ತ ವಿದ್ಯಾರ್ಹತೆ ಇರುವ ಶಿಕ್ಷಕರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಮೌಲಾನಾ ಆಝಾದ್ ಭವನ, ಸಾಧನಕೇರಿ ರಸ್ತೆ, ಸರ್ಕಾರಿ ಮುದ್ರಣಾಲಯ ಹತ್ತಿರ, ಧಾರವಾಡ ಇವರ ಕಾರ್ಯಾಲಯವನ್ನು ಸಂಪರ್ಕಿಸಬಹುದು.
ಆಸಕ್ತ ಮತ್ತು ಅರ್ಹರು ಅತಿಥಿ ಉಪನ್ಯಾಸಕ ಹುದ್ದೆಗಳ ಕುರಿತು ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ 0836-2971590, 7337768683 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕಲಘಟಗಿಯಲ್ಲಿ ಕೆಲಸ ಖಾಲಿ ಇದೆ; ಧಾರವಾಡ ಜಿಲ್ಲೆಯ ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 25 ರೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಕಲಘಟಗಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಏಪ್ರಿಲ್ 25 ರೊಳಗಾಗಿ ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ವಾಪಸ್ ಸಲ್ಲಿಕೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08370-284532 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಅಗ್ನಿವೀರ್ ವಾಯು ಹುದ್ದೆಗೆ ಅರ್ಜಿ ಹಾಕಿ; ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹೆಸರು ನೋಂದಣಿಗೆ ಅರ್ಜಿ ಕರೆದಿದೆ.
ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ವಿಭಾಗದ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್‍ಫಾರ್ಮೇಷನ್ ಟೆಕ್ನಾಲಜಿಯಲ್ಲಿ) ಶೇ 50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಗಳಿಗೆ ವಯೋಮಿತಿ ( 26/12/2002 ರಿಂದ 26/06/2006) 17.5 ರಿಂದ 21 ವರ್ಷಗಳನ್ನು ಒಳಗೊಂಡಿರುವ ಅವಿವಾಹಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ಹಾಗೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ https://agnipathvayu.cdac.in ಜಾಲತಾಣಕ್ಕೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಅಥವಾ ದೂರವಾಣಿ ಸಂಖ್ಯೆ 08182-255293, 9380663606 ಮೂಲಕ ಸಂಪರ್ಕಿಸಬಹುದು.
ಕುಂದಗೋಳದಲ್ಲಿಯೂ ಕೆಲಸ ಖಾಲಿ ಇದೆ; ಶಿಶು ಅಭಿವೃದ್ಧಿ ಯೋಜನೆ ಕುಂದಗೋಳ ತಾಲೂಕ ವ್ಯಾಪ್ತಿಯ 2022-23ನೇ ಸಾಲಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಆಸಕ್ತರು ಕುಂದಗೋಳ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಏಪ್ರಿಲ್ 22ರೊಳಗೆ ಕುಂದಗೋಳ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು 08304-290561 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications