ಕೊಪ್ಪಳ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, ನವೆಂಬರ್ 11; ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್. ಪಿ. ಎಸ್. ಜಿ. ಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2021-22 ಸಾಲಿನಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ನವೆಂಬರ್ 13ರ ತನಕ ಅರ್ಜಿ ಸಲ್ಲಿಸಬಹುದು.
ಪದವಿ 1, 3, ಮತ್ತು 5 ನೇ ಸೆಮಿಸ್ಟರ್‌ಗಳಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ, ಗಣಕಯಂತ್ರ, ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ, ವಿಷಯಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ಸ್ನಾತಕೋತರ ಪದವಿ ನಿಗದಿ ಮಾಡಲಾಗಿದೆ. ಸ್ನಾತಕೋತ್ತರ ಪದವಿಯನ್ನು ಕನಿಷ್ಠ ಶೇ 55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ನೆಟ್, ಕೆಸೆಟ್, ಎಂ. ಪಿಲ್, ಪಿಎಚ್‌ಡಿ, ಸೇವಾನುಭವ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ.
ಶಿವಮೊಗ್ಗ; ಕೆಲಸ ಖಾಲಿ ಇದೆ, ಡಿ. 8ರೊಳಗೆ ಅರ್ಜಿ ಹಾಕಿ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 13ರ ಸಂಜೆ 5 ಗಂಟೆಯ ಒಳಗಾಗಿ ಕಾಲೇಜಿನ ಕಾರ್ಯಾಲಯಕ್ಕೆ ಬಂದು ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 8861319040 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಕನಕಗಿರಿ ಎಸ್. ಪಿ. ಎಸ್. ಜಿ. ಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪಾಂಶುಪಾಲರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಅರ್ಜಿ ಆಹ್ವಾನ; ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ಕೊಪ್ಪಳ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕುರಿ/ ಮೇಕೆ ಘಟಕ ಸ್ಥಾಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುರಿ/ಮೇಕೆ ಘಟಕ ಸ್ಥಾಪಿಸಲು ವಿಷೇಶ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ 9, ಗಿರಿಜನ ಉಪಯೋಜನೆ ಪರಿಶಿಷ್ಟ ಪಂಗಡಕ್ಕೆ 4 ಮತ್ತು ಸಾಮಾನ್ಯ ಯೋಜನೆಯಡಿ 42 ಗುರಿಗಳನ್ನು ನಿಗದಿಪಡಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ನಿಗದಿತ ಅರ್ಜಿಗಳನ್ನು ಸಹಾಯಕ ನಿರ್ದೇಶಕರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಕೊಪ್ಪಳ ಕಛೇರಿಯಿಂದ ಪಡೆದುಕೊಳ್ಳಬಹುದುದು.
ಅಗತ್ಯ ದಾಖಲೆಗಳ ಜೊತೆ ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 25ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ (ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ (ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ (ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ (ಸಾಮಾನ್ಯ ಅಭ್ಯರ್ಥಿ) ಮೀಸಲಾತಿ ನಿಗದಿ ಮಾಡಲಾಗಿದದೆ.
ಆಯ್ಕೆಯಾದ ಗ್ರಂಥಾಲಯ ಮೇಲ್ವಿಚಾರಕರರಿಗೆ ಮಾಸಿಕ ಗೌರವ ಸಂಭಾವನೆ 12,000 ರೂ. ಆಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಸ್ಥಳೀಯ ನಿವಾಸಿಗಳಾಗಿರತಕ್ಕದ್ದು. ಕನಿಷ್ಟ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು ಮತ್ತು ಆಯಾ ಪಂಚಾಯಿತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿರಬೇಕು.
ಅರ್ಜಿ ಹಾಗೂ ಇತರೆ ದಾಖಲಾತಿಗಳನ್ನು ಪಂಚಾಯಿತಿಗೆ ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನ. ಅರ್ಜಿ ನಮೂನೆಯನ್ನು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 08182-222905 ಸಂಖ್ಯೆಗೆ ಕರೆ ಮಾಡಿ.