ಕೊಪ್ಪಳ; ಅತಿಥಿ ಉಪನ್ಯಾಸಕ ಹುದ್ದೆ, ಮೇ 29ರ ತನಕ ಅರ್ಜಿ ಹಾಕಿ
ಕೊಪ್ಪಳ, ಮೇ 22; ಕೊಪ್ಪಳದಲ್ಲಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನವಾಗಿದೆ.
ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯಿಂದ ಕಾರಟಗಿ ತಾಲೂಕಿನ ಜಮಾಪೂರದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಜಮಾಪೂರ ಇಲ್ಲಿಗೆ ಜೀವಶಾಸ್ತ್ರ ಉಪನ್ಯಾಸಕರು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಬೇಕಾಗಿದ್ದಾರೆ. ಅರ್ಜಿ ಸಲ್ಲಿಕೆ ಮಾಡುವವರು ಎಂ. ಎಸ್. ಸಿ ಮತ್ತು ಬಿಎಡ್ ಪದವಿ ಪಡೆದಿರಬೇಕು. ಆಯ್ಕೆಯಾದ ಉಪನ್ಯಾಸಕರಿಗೆ ಉಚಿತ ವಸತಿ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ.
ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಜಮಾಪೂರ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 9481660459.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಪಂಚಾಯತಿ ವ್ಯಾಪ್ತಿಯ ಉಳ್ಳೂರು, ಗುಲ್ವಾಡಿ ಹಾಗೂ ಯಡಮೊಗೆ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ತಲಾ 1 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನವಾಗಿದೆ. ಅರ್ಜಿ ನಮೂನೆ, ಮೀಸಲಾತಿ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.












Click it and Unblock the Notifications