ಸೊರಬ; ಅರೆಕಾಲಿಕ ಉಪನ್ಯಾಸಕರ ನೇಮಕಾತಿ, ಅರ್ಜಿ ಹಾಕಿ
ಶಿವಮೊಗ್ಗ, ಸೆಪ್ಟೆಂಬರ್ 27; ಸೊರಬದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯು 2023-24ನೇ ಸಾಲಿನಲ್ಲಿ ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಗತ್ಯ ದಾಖಲೆಗಳ ಜೊತೆಗೆ ಪ್ರಾಚಾರ್ಯರ ಕಛೇರಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
2023-24ನೇ ಶೈಕ್ಷಣಿಕ ಸಾಲಿಗೆ ವಿವಿಧ ವಿಭಾಗಗಳಲ್ಲಿ ಉಪನ್ಯಾಸಕರ ಕೊರತೆ ಇರುವುದರಿಂದ ಅರೆಕಾಲಿಕ ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

ಆಯಾ ವಿಭಾಗಗಳ ವಿದ್ಯಾರ್ಥಿಗಳಿಗೆ ಪಾಠ, ಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರುಗಳ ಅವಶ್ಯಕತೆ ಇರುವುದರಿಂದ ಇ ಮತ್ತು ಸಿ ವಿಭಾಗ, ಆಟೋಮೊಬೈಲ್ ವಿಭಾಗ, ಸಿಎ ವಿಭಾಗ, ಮೆಕ್ಯಾನಿಕಲ್ ವಿಭಾಗಗಳಿಗೆ ಅರೆಕಾಲಿಕ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಬಿಇ ಇನ್ ಇ ಮತ್ತು ಸಿ, ಬಿಇ ಇನ್ ಆಟೋಮೊಬೈಲ್, ಬಿಇ ಇನ್ ಸಿಎಸ್, ಬಿಇ ಇನ್ ಮೆಕ್ಯಾನಿಕ್‌ಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ಪ್ರಮಾಣ ಪತ್ರ, ರೆಸ್ಯೂಮ್, ಫೋಟೊ ಅಗತ್ಯ ದಾಖಲೆಗಳೊಂದಿಗೆ ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬೇಕಿದೆ.
ಸಹಾಯಧನ ಪಡೆಯಲು ಅರ್ಜಿ ಆಹ್ವಾನ; ಶಿವಮೊಗ್ಗದ ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅರ್ಹ ಮೀನುಗಾರರಿಂದ ಅರ್ಜಿ ಸಲ್ಲಿಕೆ ಮಾಡಬಹುದು.
ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆಯಬಹುದು ಅಥವಾ http://shimoga.nic.in ಪೋರ್ಟಲ್ ಮೂಲಕ ದಿನಾಂಕ 30/09/2023ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು. ಶಿವಮೊಗ್ಗ 9986040981, ಭದ್ರಾವತಿ 9743370815, ಶಿಕಾರಿಪುರ 9535386449, ಸಾಗರ ಮತ್ತು ಸೊರಬ 9538044365, ತೀರ್ಥಹಳ್ಳಿ 8655132438.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications